ಪ್ರಗತಿವಾಹಿನಿ ಸುದ್ದಿ: ದಕ್ಷಿಣ ಕನ್ನಡ-ಕೊಡಗು ಭಾಗಗಳಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದು, 5 ವರ್ಷಗಳ ಬಳಿಕ ಈ ಭಾಗದಲ್ಲಿ ಕೆಂಪು ಉಗ್ರರು ಮತ್ತೆ ಕಾಣಿಸಿಕೊಂಡಿದ್ದಾರೆ.
ಕಡಮಕಲ್ಲುಬಳಿಯ ಕೂಜಿಮಲೆಯ ರಬ್ಬರ್ ಎಸ್ಟೇಟ್ ಬಳಿ ಇರುವ ಅಂಗಡಿಯೊಂದರಲ್ಲಿ 8 ಜನರಿದ್ದ ನಕ್ಸಲರ ಗುಂಪು ದಿನಸಿ ಖರೀದಿಸಿ ಹೋಗಿದೆ. ಈ ನಿಟ್ಟಿನಲ್ಲಿ ಪೊಲೀಸರು ನಕ್ಸಲರಿಗಾಗಿ ತೀವ್ರ ಶೋಧ ನಡೆಸಿದ್ದಾರೆ.
ಕೂಜಿಮಲೆ, ಕಲ್ಮಕ್ಕಾರ್ ಗೆ ನಕ್ಸಲ್ ನಿಗ್ರಹ ಪಡೆ ಭೇಟಿ ನೀಡಿ ಪರಿಶೀಲಿಸಿದೆ. ಇನ್ನೊಂದೆಡೆ ದಕ್ಷಿಣ ಕನ್ನಡ ಹಾಗೂ ಕೊಡಗು ಪೊಲೀಸರು ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಕ್ಸಲರು ಕಾಣಿಸಿಕೊಂಡಿದ್ದರು. ಉಡುಪಿಯ ಹೆಬ್ರಿ ಮೂಲದ ವಿಕ್ರಮ್ ಗೌಡ ನೇತೃತ್ವದ ತಂಡ ಬೈಂದೂರು ತಾಲೂಕಿನ ಕೊಲ್ಲೂರು, ಮುದೂರು, ಜಡ್ಕಲ್, ಬೆಳ್ಕಲ್ ಗ್ರಾಮ ಸುತ್ತಮುತ್ತ ಓಡಾಡಿರುವ ಶಂಕೆ ವ್ಯಕ್ತವಾಗಿತ್ತು. ಕೇರಳದಿಂದ ಉಡುಪಿ ಭಾಗಕ್ಕೆ ಬಂದು ಹೋಗಿವೆ ಎಂದು ತಿಳಿದುಬಂದಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ