Kannada NewsKarnataka NewsNationalPolitics

*ನಕ್ಸಲರಿಂದ ಭದ್ರತಾ ಸಿಬ್ಬಂದಿಯಿದ್ದ ವಾಹನ ಸ್ಪೋಟ: 9 ಮಂದಿ ಯೋಧರು ಹುತಾತ್ಮ*

ಪ್ರಗತಿವಾಹಿನಿ ಸುದ್ದಿ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಸೋಮವಾರ ನಕ್ಸಲರ ಗುಂಪು ಪೊಲೀಸ್‌ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಾಹನವನ್ನು ಸುಧಾರಿತ ಸ್ಫೋಟಕ ಸಾಧನದಿಂದ ಸ್ಫೋಟಿಸಿದೆ.

ಘಟನೆಯಲ್ಲಿ ಈವರೆಗೆ ಕನಿಷ್ಠ 9 ಮಂದಿ ಯೋಧರು ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು. ಬಿಜಾಪುರ ಜಿಲ್ಲೆಯ ಬೆದ್ರೆ-ಕುಟ್ರು ರಸ್ತೆಯಲ್ಲಿ ಈ ಸ್ಫೋಟ ಸಂಭವಿಸಿದೆ.

ಘಟನೆಯಲ್ಲಿ ಎಂಟು ಜವಾನರು ಮತ್ತು ಚಾಲಕ ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆಯಿಂದ ಹಿಂದಿರುಗುತ್ತಿದ್ದ ಕನಿಷ್ಠ 20 ಸೈನಿಕರನ್ನು ವಾಹನವು ಹೊತ್ತೊಯ್ಯುತ್ತಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button