
ಪ್ರಗತಿವಾಹಿನಿ ಸುದ್ದಿ: ಮೂಡಿಗೆರೆ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರಿಗೂ ಅಶ್ಲೀಲ ಕಮೆಂಟ್ ಗಳ ಕಾಟ ಶುರುವಾಗಿದೆ. ಈ ಬಗ್ಗೆ ಸ್ವತಃ ನಯನಾ ಮೋಟಮ್ಮ ತಿಳಿಸಿದ್ದಾರೆ.
ಇನ್ ಸ್ಟಾಗ್ರಾಂ ನಲ್ಲಿ ಕಿಡಿಗೇಡಿಗಳು ಅಶ್ಲೀಲ ಕಮೆಂಟ್ ಗಳನ್ನು ಕಳುಹಿಸಿದ್ದು, ಆಕ್ಷೇಪಾರ್ಹ ಪದಗಳನ್ನು ಬಳಸಿ ಕಮೆಂಟ್ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕಿ ನಯನಾ ಮೋಟಮ್ಮ, ಇನ್ ಸ್ಟಾಗ್ರಾಂನಲ್ಲಿ ಎರಡು ಅಧಿಕೃತ ಖಾತೆ ಹೊಂದಿದ್ದಾರೆ. ರಾಜಕೀಯ ವಿಚಾರದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಹಾಗೂ ಪ್ರವಾಸ, ವೈಯಕ್ತಿಕ ವಿಚಾರ ಹಂಚಿಕೊಳ್ಳಲು ಬೇರೆ ಬೇರೆ ಖಾತೆ ಹೊಂದಿದ್ದು, ವೈಯಕ್ತಿಕ ಇನ್ ಸ್ಟಾಗ್ರಾಂ ಖಾತೆಗೆ ಅಶ್ಲೀಲ ಕಮೆಂಟ್ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

