EducationLatestNational

*ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದು*

ಪ್ರಗತಿವಾಹಿನಿ ಸುದ್ದಿ: ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ಬೆನ್ನಲ್ಲೇ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಮಹತ್ವದ ನಿರ್ಧಾರ ಕೈಗೊಂಡಿದ್ದು, ಮೇ 3 ರಂದು ನಡೆದಿದ್ದ ನೀಟ್ ಯುಜಿ ಪರೀಕ್ಷೆಯನ್ನು  ರದ್ದುಗೊಳಿಸಿದೆ. 

ರಾಜಸ್ಥಾನದ ಸಿಕಾರ್‌ನಲ್ಲಿ ಮೇ 1 ರಂದೇ ‘ಊಹೆ ಪತ್ರಿಕೆ’ (Guess Paper) ರೂಪದಲ್ಲಿ ಪ್ರಶ್ನೆಗಳು ಪ್ರಸಾರವಾಗಿದ್ದವು. ಈ ಊಹೆ ಪತ್ರಿಕೆಯಲ್ಲಿದ್ದ ಸುಮಾರು 100ಕ್ಕೂ ಹೆಚ್ಚು ಜೀವಶಾಸ್ತ್ರ ಮತ್ತು ರಸಾಯನಶಾಸ್ತ್ರದ ಪ್ರಶ್ನೆಗಳು ಅಸಲಿ ಪ್ರಶ್ನೆಪತ್ರಿಕೆಗೆ ಹೋಲಿಕೆಯಾಗಿದ್ದವು ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ಈ ಅವ್ಯವಹಾರಗಳ ಕುರಿತು ರಾಜಸ್ಥಾನದ ವಿಶೇಷ ಕಾರ್ಯಾಚರಣೆ ತಂಡ (SOG) ತನಿಖೆಯನ್ನು ಆರಂಭಿಸಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಮಾಹಿತಿ ಸಿಕ್ಕಿದ ಕೂಡಲೇ, NTA ಇದನ್ನು ತಕ್ಷಣವೇ ಕೇಂದ್ರ ತನಿಖಾ ಸಂಸ್ಥೆಗಳಿಗೆ ವರ್ಗಾಯಿಸಿತ್ತು.

ಪರೀಕ್ಷೆ ರದ್ದುಗೊಂಡಿದ್ದು, ಹೊಸ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು NTA ತಿಳಿಸಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂಜದ್ರ ಸರಕಾರ ಸಿಬಿಐ ತನಿಖೆಗೆ ನಿರ್ಧರಿಸಿದೆ ಎಂದು ಗೊತ್ತಾಗಿದೆ.

Home add -Advt

ಈ ಮಧ್ಯೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರತಿ ಬಾರಿ ಪ್ರಶ್ನೆ ಪತ್ರಿಕೆ ಲೀಕ್ ಆಗುತ್ತಿದ್ದು, ಕೇಂದ್ರ ಸರಕಾರ ಗಂಭೀರ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಹ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

https://www.facebook.com/share/p/18BRXUpG9N
https://www.instagram.com/p/DYO0sl9GMBz/?igsh=aWhhcjlubmtnaGZ3

Related Articles

Back to top button