Kannada NewsLatestNationalPolitics

*ನೀಟ್ ಅಕ್ರಮ: ಅಪರಾಧಿಗಳಿಗೆ ಶಿಕ್ಷಿಸಲು ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪನೆ: ಪ್ರಧಾನಿ ಮೋದಿ ಭರವಸೆ*

ಪ್ರಗತಿವಾಹಿನಿ ಸುದ್ದಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆಗೆ ಒತ್ತಾಯಿಸಿ, ಯುವಜನತೆಯ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದೆ ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದಿದ್ದಾರೆ.

ಪರೀಕ್ಷಾ ಅಕ್ರಮ ಎಸಗಿದ ಅಪರಾಧಿಗಳಿಗೆ ತಕ್ಷಣವೇ ಕಠಿಣ ಶಿಕ್ಷೆ ಖಚಿತಪಡಿಸಲು ‘ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು’ ಸ್ಥಾಪಿಸುವುದಾಗಿ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, ದೇಶದ ಯುವಜನತೆಯ ಭವಿಷ್ಯ ಮತ್ತು ಕಲ್ಯಾಣಕ್ಕಿಂತ ಸರ್ಕಾರಕ್ಕೆ ಬೇರೆ ಯಾವುದೂ ಮುಖ್ಯವಲ್ಲ ಎಂದು ಪ್ರತಿಪಾದಿಸಿದ್ದಾರೆ.

Home add -Advt

ನಮ್ಮ ಯುವಕರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ನಮಗೆ ಬೇರೇನೂ ಮುಖ್ಯವಲ್ಲ, ಪ್ರಶ್ನೆಪತ್ರಿಕೆ ಸೋರಿಕೆ ದಂಧೆಯಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರಿಗೂ ತ್ವರಿತ ಹಾಗೂ ಕಠಿಣ ಶಿಕ್ಷೆಯಾಗುವುದನ್ನು ಖಚಿತಪಡಿಸಲು ನಾವು ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ. ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡುವ ಯಾರನ್ನೂ ಸರ್ಕಾರ ಬಿಡುವುದಿಲ್ಲ ಎಂದಿದ್ದಾರೆ.

ಪ್ರಧಾನಿ ನೀಡಿದ ಮುಖ್ಯ ಭರವಸೆಗಳು
ತ್ವರಿತ ವಿಚಾರಣೆ: ನೀಟ್ ಸೇರಿದಂತೆ ಎಲ್ಲಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಸಾಮಾನ್ಯ ನ್ಯಾಯಾಲಯಗಳಲ್ಲಿ ವಿಳಂಬ ಮಾಡದೇ, ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳ ಮೂಲಕವೇ ಶೀಘ್ರವಾಗಿ ವಿಚಾರಣೆ ನಡೆಸಿ ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಲಾಗುವುದು.

ವಿದ್ಯಾರ್ಥಿಗಳ ಹಿತರಕ್ಷಣೆ: ಪರೀಕ್ಷಾ ಪಾರದರ್ಶಕತೆ ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡಲು ಸರ್ಕಾರ ನಿರಂತರವಾಗಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದು, ಇದು ಆ ಸರಣಿ ಸುಧಾರಣೆಗಳ ಪ್ರಮುಖ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.

Related Articles

Back to top button