Latest

ನೀಟ್ ಪರೀಕ್ಷೆಯಲ್ಲಿ ಒಳ ಉಡುಪು ತೆಗೆಸಿದ ಪ್ರಕರಣ; ಐವರು ಮಹಿಳೆಯರ ಬಂಧನ

ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ನೀಟ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರ ಒಳ ಉಡುಪು ತೆಗೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಐವರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ.

ನೀಟ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರಿಗೆ ಒಳ ಉಡುಪುಗಳನ್ನು ತೆಗೆದಿಟ್ಟು ಪರೀಕ್ಷೆ ಬರೆಯುವಂತೆ ಸೂಚಿಸಿದ್ದ ಪ್ರಕರಣ ಸಂಬಂಧ ಐವರು ಮಹಿಳಾ ಪರೀಕ್ಷಾ ಸಿಬ್ಬಂದಿಗಳನ್ನು ಪೊಲೀಸರು ಸೆರೆಹಿಡಿದಿದ್ದಾರೆ.

Home add -Advt

ಐವರ ಪೈಕಿ ಮೂವರು ರಾಷ್ಟ್ರೀಯ ಪರೀಕ್ಷಾ ಆಯೋಗ (ಎನ್ ಟಿಎ) ಅಡಿ ನೇಮಕಗೊಂಡಿದ್ದಾರೆ. ಇನ್ನಿಬ್ಬರು ಕೊಲ್ಲಂನ ಆಯುರ್ ನ ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದವರಾಗಿದ್ದಾರೆ.

ವಿದ್ಯಾರ್ಥಿನಿಯೊಬ್ಬರ ದೂರಿನ ಅನ್ವಯ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಐವರನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.
ಶೃಂಗೇರಿ ಶ್ರೀಗಳಿಗೆ ಅವಮಾನ; ಆರೋಪಿಗೆ 3 ವರ್ಷ ಜೈಲು ಶಿಕ್ಷೆ

Related Articles

Back to top button