EducationKannada NewsKarnataka NewsNational

ನಾಳೆ ನಡೆಯಬೇಕಿದ್ದ NEET-PG ಪರೀಕ್ಷೆ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ: ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರತೆಗೆ ಸಂಬಂಧಿಸಿದಂತೆ ಇತ್ತೀಚಿನ ಆರೋಪಗಳನ್ನು ಪರಿಗಣಿಸಿ ನಾಳೆ (ಜೂನ್ 23) ನಡೆಯಬೇಕಿದ್ದ NEET-PG ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ.

NEET-PG ಪ್ರವೇಶ ಪರೀಕ್ಷೆಯನ್ನು ಮುಂದೂಡಿ, ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. NEET-PG ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿಯು ನಡೆಸುತ್ತದೆ. ಶೀಘ್ರದಲ್ಲೇ NEET-PG ಪರೀಕ್ಷೆಗೆ ಹೊಸ ವೇಳಾಪಟ್ಟಿ ಪ್ರಕಟವಾಗಲಿದೆ ಎಂದು ತಿಳಿದು ಬಂದಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button