Cancer Hospital 2
Beereshwara 36
LaxmiTai 5

*ನೀಟ್-ಪಿಜಿ ಪರೀಕ್ಷೆಗೆ ದಿನಾಂಕ ಪ್ರಕಟ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ವೈದ್ಯಕೀಯ ಕ್ಷೇತ್ರದ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯಲಿರುವ ನೀಟ್-ಪಿಜಿ ಪರೀಕ್ಷೆ ದಿನಾಂಕ ಘೋಷಣೆಯಾಗಿದೆ.

ಈ ಹಿಂದೆ ಜೂನ್ 23ರಂದು ನಿಗದಿಯಾಗಿದ್ದ ನೀಟ್-ಪಿಜಿ ಪರೀಕ್ಷೆಯಲ್ಲಿ ಅಕ್ರಮ ನಡೆಯುವ ಮುನ್ಸೂಚನೆ ಹಿನ್ನೆಲೆಯಲ್ಲಿ ಪರೀಕ್ಷಾ ದಿನಾಂಕವನ್ನು ಮುಂದೂಡಿತ್ತು. ಇದೀಗ ನೀಟ್-ಪಿಜಿ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗಿದೆ. ಆಗಸ್ಟ್ 11ರಂದು ನೀಟ್-ಪಿಜಿ ಪರೀಕ್ಷೆ ನಡೆಯಲಿದೆ.

Emergency Service

ಆಗಸ್ಟ್ 11ರಂದು ಬೆಳಿಗ್ಗೆ ಹಾಗೂ ಮಧ್ಯಾಹ್ನ 2 ಪಾಳಿಯಲ್ಲಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಲಾಗಿದೆ.

ಮೇ 5ರಂದು ನಡೆದಿದ್ದ ನೀಟ್-ಯುಜಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಹಲವು ಅಕ್ರಮ ನಡೆದಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನೀಟ್-ಪಿಜಿ ಪರೀಕ್ಷೆಗೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದ್ದು, ಜೂನ್ 23ರಂದು ನಿಗದಿಯಾಗಿದ್ದ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ನೀಟ್-ಪಿಜಿ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ ಮಾಡಲಾಗಿದೆ.


Bottom Add3
Bottom Ad 2