ಪ್ರಗತಿವಾಹಿನಿ ಸುದ್ದಿ: ಭಾರೀ ಪ್ರವಾಹದಿಂದಾಗಿ ಸಾವಿರಾರು ಜನರು ಸಾವನ್ನಪ್ಪಿದ ಬೆನ್ನಲ್ಲೇ ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ 30 ಸರ್ಕಾರಿ ಅಧಿಕಾರಿಗಳನ್ನು ಗಲ್ಲಿಗೇರಿಸಿದ್ದಾರೆ ಎಂದು ಮಾದ್ಯಮಗಳಲ್ಲಿ ವರದಿಯಾಗಿದೆ.
ಘಟನೆಯ ಬಗ್ಗೆ ದಕ್ಷಿಣ ಕೊರಿಯಾದ ಮಾಧ್ಯಮ ವರದಿ ಮಾಡಿದೆ. ಇತ್ತೀಚೆಗೆ ಉತ್ತರ ಕೋರಿಯಾದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿತ್ತು. ಪ್ರವಾಹದಿಂದಾಗಿ ಪ್ರವಾಹದಿಂದಾಗಿ 4,000 ಕ್ಕೂ ಹೆಚ್ಚು ಮನೆಗಳು ನೆಲಸಮವಾಗಿತ್ತು ಮತ್ತು 5,000 ಜನರು ನಿರಾಶ್ರಿತರಾಗಿದ್ದರು.
ಘಟನೆಯ ಬೆನ್ನಲ್ಲೇ ಪ್ರವಾಹದ ವೇಳೆ ತಮ್ಮ ಕರ್ತವ್ಯಗಳನ್ನು ನಿರ್ಲಕ್ಷಿಸಿದ ಅಧಿಕಾರಿಗಳನ್ನು ಕಟ್ಟುನಿಟ್ಟಾಗಿ ಶಿಕ್ಷಿಸುವಂತೆ ಕಿಮ್ ಜಾಂಗ್ ಉನ್ ಈ ಹಿಂದೆ ಅಧಿಕಾರಿಗಳಿಗೆ ಆದೇಶ ನೀಡಿದ್ದರು. ಈ ಬೆನ್ನಲ್ಲೇ 30 ಸರ್ಕಾರಿ ಅಧಿಕಾರಿಗಳಿಗೆ ಮರಣ ದಂಡನೆ ಶಿಕ್ಷೆ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ