ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ನಿರಂಜನಯ್ಯ ಹಿರೇಮಠ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಸೋಮವಾರ ಬೆಳಗಾವಿ ಜಿಲ್ಲಾ ಜಂಗಮ ಸಂಘಟನೆ, ವಿವಿಧ ಹಿಂದೂ ಸಂಘಟನೆ ಹಾಗೂ ಮಹಿಳಾ ಸಂಘಟನೆಗಳು ಚನ್ನಮ್ಮ ವೃತ್ತದಲ್ಲಿ ಒಂದು ಗಂಟೆಗಳ ಕಾಲ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ಶನಿವಾರ ಕೂಟದಿಂದ ಚನ್ನಮ್ಮ ವೃತ್ತದವರೆಗೆ ಸಾಗಿದ ಪ್ರತಿಭಟನಾಕಾರರು, ಹಂತಕ ಫಯಾಜ್ ಗೆ ಗಲ್ಲು ಶಿಕ್ಷೆಯಾಗಬೇಕು ಎಂದು ದಾರಿಯುದ್ದಕ್ಕೂ ಘೋಷಣೆ ಕೂಗಿದರು.
ಫಯಾಜ್ ನೇಹಾಳನ್ನು ಅಮಾನವೀಯವಾಗಿ ಕೊಲೆ ಮಾಡಿದ್ದಾನೆ. ಇದು ಅಕ್ಷಮ್ಯ ಅಪರಾಧವಾಗಿದೆ. ನ್ಯಾಯಾಲಯ ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ತ್ವರಿತವಾಗಿ ತೀರ್ಪು ನೀಡಿ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಸದೆ ಮಂಗಲಾ ಅಂಗಡಿ, ಡಾ.ಸೋನಾಲಿ ಸರ್ನೋಬತ್, ಪಾಲಿಕೆಯ ಬಿಜೆಪಿ ಸದಸ್ಯರು, ವಿವಿಧ ಹಿಂದು ಸಂಘಟನೆಯ ಪದಾಧಿಕಾರಿಗಳು, ಜಂಗಮ ಸಂಘಟನೆಯ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಜನ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ