Kannada NewsKarnataka News

ನೇಹಾ ಕೊಲೆ ಪ್ರಕರಣ: ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸರಕಾರ ನಿರ್ಧಾರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹೀನಾಯ ಹತ್ಯೆ ಪ್ರಕರಣದ ಕುರಿತು ತನಿಖೆ ನಡೆಸಲು ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲು ಸರಕಾರಿ ನಿರ್ಧರಿಸಿದೆ.

ಕರ್ನಾಟಕ ಸರ್ಕಾರವು ಪ್ರಕರಣದಲ್ಲಿ ದಾಖಲಾಗಿರುವ ಪ್ರಥಮ ವರ್ತಮಾನ ವರದಿಯ ಆಧಾರದ ಮೇಲೆ ಮತ್ತು ಪ್ರಕರಣದ ಕುರಿತು ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸರ್ಕಾರವು ಪ್ರಸ್ತುತ ಪ್ರಕರಣದ ವಿಚಾರಣೆಗೆ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ಕುರಿತು ಇಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿದರು.

ಈ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲು ಸರ್ಕಾರವು ನಿರ್ಧರಿಸಿದೆ.

  1. ಸರ್ವೋಚ್ಚ ನ್ಯಾಯಾಲಯವು ಮಹಿಳೆಯರ ವಿರುದ್ಧದ ಹೀನಾಯ ಅಪರಾಧ ಪ್ರಕರಣಗಳಲ್ಲಿ ನೀಡಿರುವ ಮಾರ್ಗದರ್ಶನಗಳನ್ನು ಕೂಲಕುಂಷವಾಗಿ ಪರೀಶಿಲಿಸಿ, ಹಾಗೂ ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ದಂಡ ಸಂಹಿತೆಗೆ ಮಾಡಲಾಗಿರುವ ತಿದ್ದುಪಡಿಗಳನ್ನು ಸರ್ಕಾರವು ಗಂಭೀರವಾಗಿ ಗಮನಿಸಿದೆ.
  2. ಬರ್ಬರ ಹತ್ಯೆ ಹಿನ್ನೆಲೆಯಲ್ಲಿ ಈ ಪ್ರಕರಣವು ಜನಮಾನಸದ ನೆನಪಿನ ಆಳದಿಂದ ಮಾಸುವ ಮೊದಲೇ ಅಪರಾಧಿಗೆ ಶಿಕ್ಷೆಯಾಗಬೇಕೆಂಬ ಹಿನ್ನೆಲೆಯಲ್ಲಿ ಸಾಮಾಜಿಕ ಪರಿಣಾಮಗಳನ್ನು ಪರಿಗಣಿಸಿ, ಕುಮಾರಿ,ನೇಹಾ ಹಿರೇಮಠ ಪ್ರಕರಣವು ಸಾಮಾಜಿಕ ಮತ್ತು ವಿದ್ಯಾರ್ಥಿಗಳ ಮೇಲೆ ತೀವ್ರ ಪರಿಣಾಮ ಬೀರುವಂತಾದ್ದಾಗಿರುತ್ತದೆ. ಆದಕಾರಣ ಒಂದು ವಿಶೇಷ ನ್ಯಾಯಾಲಯದ ಅವಶ್ಯಕತೆಯನ್ನು ಸರ್ಕಾರವು ಮನಗಂಡಿದೆ.

ಈ ಹಿನ್ನೆಲೆಗಳಲ್ಲಿ ಮಹಿಳೆಯ ವಿರುದ್ಧದ ಅಪರಾಧ ಕುರಿತು ವಿಶೇಷ ನ್ಯಾಯಾಲಯವೊಂದನ್ನು ಸ್ಥಾಪಿಸಲು ತಕ್ಷಣ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ನಿರ್ಧರಿಸಲಾಯಿತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button