ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯ ಖಾಸಗಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಶನಿವಾರ ಬೆಳಗಾವಿ ಜಿಲ್ಲಾ ಜಂಗಮ ಸಂಘಟನೆ ಹಾಗೂ ಶ್ರೀರಾಮ್ ಸೇನಾ ಹಿಂದೂಸ್ತಾನ್ ಸಂಘಟನೆಗಳು ಇಲ್ಲಿನ ಚನ್ನಮ್ಮ ವೃತ್ತದಲ್ಲಿ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಎಂಸಿಎ ವಿಭಾಗದಲ್ಲಿಯೇ ಹಳೆ ವಿದ್ಯಾರ್ಥಿಯಾಗಿದ್ದ ಫಯಾಜ್ ಎಂಬ ಅನ್ಯಕೋಮಿನ ಯುವಕ ನೇಹಾಳ ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ ಗುರುವಾರ ಪರೀಕ್ಷೆ ಬರೆದು ಮನೆಗೆ ಹಿಂದಿರುಗಿ ಹೋಗುವಾಗ ನೇಹಾಳನ್ನು ಕಾಲೇಜ್ ಕ್ಯಾಂಪಸ್ ನಲ್ಲಿಯೇ ಚಾಕುವಿನ ಇರಿದು ಕೊಲೆ ಮಾಡಿದ್ದಾನೆ. ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಸಿದರು.
ನೇಹಾಳ ಕೊಲೆ ಪ್ರಕರಣದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಇತ್ತೀಚಿನ ದಿನಗಳಲ್ಲಿ ಹಿಂದು ಧರ್ಮದ ಮಹಿಳೆಯರಿಗೆ ರಕ್ಷಣೆ ಇಲ್ಲವಾಗಿದೆ. ಇಂಥ ಕ್ರೂರಿಗಳಿಗೆ ಶಿಕ್ಷೆ ಕೊಡದಿದ್ದರೇ ಮುಂದ ನಮ್ಮ, ನಿಮ್ಮ ಮನೆಯಲ್ಲಿಯೂ ಇಂಥ ಘಟನೆ ನಡೆಯಬಹುದು. ನೇಹಾ ಹಿರೇಮಠ ಕೊಲೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಮಹಾಂತೇಶ ರಣಗಟ್ಟಗಿಮಠ, ವೀರುಪಾಕ್ಷಿ ನೀರಲಗಿಮಠ, ಶಂಕ್ರಯ್ಯ ಹಿರೇಮಠ, ದಿಗ್ವಿಜಯ ಸಿದ್ನಾಳ, ಮಹಾಂತೇಶ ವಕ್ಕುಂದ, ಮುರುಗೇಶ ಹಿರೇಮಠ, ರಮಾಕಾಂತ ಕೊಂಡುಸ್ಕರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ