GIT add 2024-1
Beereshwara 33

*ನೇಹಾ ಪೋಷಕರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ್ ಅವರ ಮಗಳು ನೇಹಾ ಹಿರೇಮಠ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯ ಬಿಡ್ನಾಳದಲ್ಲಿರುವ ಅವರ ನಿವಾಸಕ್ಕೆ ಮಹಿಲಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ಭೇಟಿ ನೀಡಿ, ನೇಹಾ ಪೋಷಕರಿಗೆ ಸಾಂತ್ವನ ಹೇಳಿದರು.

ಮಗಳನ್ನು ಕಳೆದುಕೊಂಡು ನೋವಿನಲ್ಲಿರುವ ನೇಹಾ ತಂದೆ ತಾಯಿಗಳಿಗೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆರೋಪಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆ ನೀಡಿ, ಮಗಳ ಸಾವಿಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಹುಬ್ಬಳ್ಳಿ ಪೋಲಿಸ್ ಆಯುಕ್ತರಾದ ರೇಣುಕಾ ಶಶಿಕುಮಾರ್, ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ್, ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ಸುವರ್ಣ ಕಲ್ಲಕುಂಟ್ಲ, ಮೋಹನ್ ಲಿಂಬಿಕಾಯಿ, ಬಂಗಾರೇಶ್ ಹಿರೇಮಠ್, ರಾಜಶೇಖರ್ ಮೆಣಸಿನಕಾಯಿ ಹಾಗೂ ಅನೇಕರು ಇದ್ದರು.

Emergency Service

ನೇಹಾ ಪೋಷಕರ ಭೇಟಿ ಬಳಿಕ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನೇಹಾ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ನೇಹಾ ಪಾಲಕರು ತಮ್ಮ ದುಃಖವನ್ನು ಹಂಚಿಕೊಂಡಿದ್ದಾರೆ‌. ದೊಡ್ಡ ಸಮಾಜ ನಾವೆಲ್ಲಾ ಜೊತೆಯಲ್ಲಿ ಇರ್ತೀವಿ ಅಂತ ಹೇಳಿದ್ದೇನೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದು ಸಚಿವರು ಹೇಳಿದರು ‌

ಇಂಥ ಘಟನೆ ನಡೆಯಬಾರದಿತ್ತು. ಇದನ್ನು ಕಠಿಣ‌ ಶಬ್ದದಿಂದ ಖಂಡಿಸುತ್ತೇನೆ. ಪ್ರಕರಣದ ತನಿಖೆ ಬಗ್ಗೆ ಯಾರಿಗೂ, ಯಾವುದೇ ಸಂಶಯ ಬೇಡ. ತನಿಖೆ ನಡೆಯಲಿದ್ದು, ನಾನೊಬ್ಬ ತಾಯಿಯಾಗಿ ಘಟನೆಯನ್ನು ಖಂಡಿಸುತ್ತೇನೆ ಎಂದು ಸಚಿವರು ಹೇಳಿದರು. ಇಂತಹ ಸಂದರ್ಭದಲ್ಲಿ‌ ಸಾಂತ್ವನ, ಸಮಾಧಾನ ಹೇಳಿದರೆ ಸಾಲದು. ಈ ವೇಳೆ ಯಾವುದೇ ರಾಜಕೀಯ ಮಾತುಗಳ ಬೇಡ ಎಂದು ಪತ್ರಕರ್ತರಲ್ಲಿ ಮನವಿ ಮಾಡಿದರು.

ಬೇರೆ ಯಾವ ವಿಷಯದ ಬಗ್ಗೆಯೂ ಮಾತನಾಡುವ ಸಂದರ್ಭ‌ ಇದಲ್ಲ. ಆ ಹೆಣ್ಣು ಮಗಳಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ಇದೆ. ನಿರಂಜನ್ ಹಿರೇಮಠ ಅವರು ನಮ್ಮ ಪಕ್ಷದ ಕಾರ್ಪೊರೇಟರ್. ಅವರ ಜೊತೆಗೆ ನಾವಿದ್ದೇವೆ. ಅವರ ಮಗಳಿಗೆ ಸೂಕ್ತ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಈ ವೇಳೆ ಹುಬ್ಬಳ್ಳಿ ಪೊಲೀಸ್ ಆಯುಕ್ತರಾದ ರೇಣುಕಾ ಶಶಿಕುಮಾರ್, ಯುವ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ, ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ಸುವರ್ಣ ಕಲ್ಲಕುಂಟ್ಲ, ಮೋಹನ್ ಲಿಂಬಿಕಾಯಿ, ಬಂಗಾರೇಶ ಹಿರೇಮಠ, ರಾಜಶೇಖರ ಮೆಣಸಿನಕಾಯಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.


Laxmi Tai add
Bottom Add3
Bottom Ad 2