
ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿದೆ.
2024ರ ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾನೀನು ಅರ್ಜಿಯನ್ನು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲಾ ನ್ಯಾಯಾಲಯ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಧಾರವಾಡ ಹೈಕೋರ್ಟ್ ಮೆಟ್ಟಿಲೇರಿದ್ದ. ಇದೀಗ ಧಾರವಾಡ ಹೈಕೋರ್ಟ್ ಕೂಡ ಜಾಮೀನು ಅರ್ಜಿ ವಜಾಗೊಳಿಸಿದೆ.
ನೇಹಾ ಕೊಲೆ ಹಂತಕನಿಗೆ ಜೈಲೇ ಗತಿಯಾಗಿದೆ.