ನಾನು ಪಕ್ಷದಲ್ಲಿ ಹಿರಿಯ, ಹಾಗಾಗಿ ನನಗೂ ಸಚಿವ ಸ್ಥಾನ ನೀಡಲಿ ಎಂದ ಓಲೆಕಾರ

ಪ್ರಗತಿವಾಹಿನಿ ಸುದ್ದಿ; ಹಾವೇರಿ: ನಾನೂ ಪಕ್ಷದಲ್ಲಿ ಹಿರಿಯ ಇದ್ದೇನೆ, ಮೂರು ಬಾರಿ ಶಾಸಕನಾಗಿದ್ದೇನೆ. ನನಗೆ ಸಚಿವಸ್ಥಾನ ನೀಡಿ ಎಂದು ಹಾವೇರಿ ಶಾಸಕ ನೆಹರು ಓಲೇಕಾರ ಆಗ್ರಹಿಸಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು, ಜನವರಿ 29ಕ್ಕೆ ಸಚಿವ ಸಂಪುಟ ವಿಸ್ತರಣೆ ಮಾಡೋದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಸಚಿವ ಸಂಪುಟದಲ್ಲಿ ಎಲ್ಲಾ ಸಮುದಾಯದವರು ಇದ್ದರೆ ಗೌರವ ಇರುತ್ತೆ. ಸಚಿವ ಸ್ಥಾನಕ್ಕೆ ಮಠಾದೀಶರು ಸೇರಿದಂತೆ ಎಲ್ಲರೂ ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಹಾಗಾಗಿ ಸಚಿವ ಸಂಪುಟ ವಿಸ್ತರಣೆಗೆ ಸಮಸ್ಯೆ ಇದೆ ಎಂದರು.

Home add -Advt

17 ಜನರಿಂದಲೇ ಬಿಜೆಪಿ ಸರ್ಕಾರ ಬಂದಿದೆ. ಅವರ ತ್ಯಾಗದಿಂದಲೇ ಯಡಿಯೂರಪ್ಪ ಅವರು ಸಿಎಂ ಆಗಿದ್ದಾರೆ. ಅವರಿಗೆ ಸಚಿವ ಸ್ಥಾನ ಕೊಡಲು ತಕರಾರಿಲ್ಲ. ಆದರೆ ಸೋತವರಿಗೆ ಸಚಿವ ಸ್ಥಾನ ಕೊಟ್ಟರೆ ಜನರು ತಪ್ಪಾಗಿ ಮಾತನಾಡಿಕೊಳ್ತಾರೆ. ಸೋತವರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ ಕೊಟ್ಟು ತೃಪ್ತಿ ಮಾಡಬೇಕು ಎಂದು ಹೇಳಿದರು.

ಇನ್ನು ಹಿರಿಯರಿಗೆ ಪಕ್ಷ ಸಂಘಟನೆ ಜವಾಬ್ದಾರಿ ನಿಟ್ಟಿನಲ್ಲಿ ಸಂಪುಟದಲ್ಲಿ ಹಿರಿಯರನ್ನ ಕೈಬಿಟ್ಟು ಹೊಸಬರಿಗೆ ಕೊಡೋ ವಿಚಾರದ ಬಗ್ಗೆಯೂ ಚರ್ಚೆಯಾಗಿದೆ ಎಂದು ಓಲೇಕಾರ ತಿಳಿಸಿದ್ದಾರೆ.

Related Articles

Back to top button