Kannada NewsKarnataka NewsLatest

*ಶಾಲೆಗೆ ಹೋಗುತ್ತಿದ್ದ ಬಾಲಕಿ ಮೇಲೆ ಹರಿದ ಕಾರು: ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ದೊಡ್ದಮ್ಮನ ಜೊತೆ ಶಾಲೆಗೆ ಹೋಗುತ್ತಿದ್ದ ಬಾಲಕಿಯ ಮೇಲೆ ಕಾರು ಹರಿದು 10 ವರ್ಷದ ಬಾಲಕಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೀರವಾರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ದೊಡ್ದಮ್ಮನ ಜೊತೆ ಬಾಲಕಿ ಶಾಲೆಗೆ ಹೋಗುತ್ತಿದ್ದ ವೇಳೆ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ.

ಅಪಘಾತದಲ್ಲಿ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button