*ಆಹಾರ ಸಂಗ್ರಹ ಗೋದಾಮಿನಲ್ಲಿ ಭಾರಿ ಬೆಂಕಿ ಅವಘಡ*

ಪ್ರಗತಿವಾಹಿನಿ ಸುದ್ದಿ: ಆಹಾರ ಸಂಗ್ರಹ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಇಡೀ ಗೋದಾಮು ಧಗ ಧಗನೆ ಹೊತ್ತಿ ಉರಿದಿದ್ದು, ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ವ್ಯಾಪಿಸಿದೆ. ಬೆಂಗಳೂರಿನ ನೆಲಮಂಗಲ ತಾಲೂಕಿನ ಅಡಕಮಾರನಹಳ್ಳಿಯಲ್ಲಿನ ಆಹಾರ ಸಂಗ್ರಹ ಗೋದಾಮಿನಲ್ಲಿ ಈ ಘಟನೆ ನಡೆದಿದೆ. ಆಂಜನೇಯ ದೇಗುಲದ ಬಳಿ ಇರುವ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಹಾರ ಪದಾರ್ಥಗಳು ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಸುಟ್ಟು ಭಸ್ಮವಾಗಿವೆ. ವಿಷಯ ತಿಳಿಯುತ್ತಿದ್ದಂತೆ ನೆಲಮಂಗಲ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ … Continue reading *ಆಹಾರ ಸಂಗ್ರಹ ಗೋದಾಮಿನಲ್ಲಿ ಭಾರಿ ಬೆಂಕಿ ಅವಘಡ*