Kannada NewsKarnataka NewsLatestWorld

*ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಕನ್ನಡಿಗರು: ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವಂತೆ ಸಿಎಸ್ ಗೆ ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ: ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ದೇಶಾದ್ಯಂತ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.

ಸಿಎಂ ಸೂಚನೆ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಅಗತ್ಯ ಕ್ರಮಕ್ಕೆ‌ ಮುಂದಾಗಿದ್ದಾರೆ.

ಭ್ರಷ್ಟಾಚಾರ, ಸೋಷಿಯಲ್ ಮೀಡಿಯಾ ನಿಷೇಧ ಖಂಡಿಸಿ ನೇಪಾಳದಲ್ಲಿ ಯುವಜನತೆ ನಡೆಸುತ್ತಿರುವ ಪ್ರತಿಭಟನೆ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ನೇಪಾಳದ ಸಂಸತ್, ಸುಪ್ರೀಂ ಕೋರ್ಟ್, ಸರ್ಕಾರಿ ಕಚೇರಿಗಳು, ಪ್ರಧಾನಿ ನಿವಾಸ, ಸಚಿವರ ನಿವಾಸ, ವಿಮಾನ ನಿಲ್ದಾಣಗಳಿಗೆ ಬೆಂಕಿ ಹಚ್ಚಿ ಉದ್ರಿಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಷಿಯಲ್ ಮೀಡಿಯಾ ನಿಷೇಧ ಹಿಂಪಡೆದು, ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ್ದರೂ ಹಿಂಸಾತ್ಮಕ ಪ್ರತಿಭಟನೆ ನಿಂತಿಲ್ಲ. ಇಡೀ ನೇಪಾಳದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದ್ದು, ಪ್ರತಿಭಟಾನಾಕಾರರ ಆಕ್ರೋಶದ ಜ್ವಾಲಗೆ ನೇಪಾಳ ಹೊತ್ತಿ ಉರಿಯುತ್ತಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಕಠ್ಮಂಡು ವಿಮಾನ ನಿಲ್ದಾಣ, ಬುದ್ಧ ವಿಮಾನ ನಿಲ್ದಾಣಗಳಿಗೂ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದು, ವಿಮಾನ ನಿಲ್ದಾಣಗಳಲ್ಲಿ ಹಲವು ಭಾರತೀಯರು, ಕನ್ನಡಿಗರು ಸಿಲುಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ರಕ್ಷಣೆಗೆ ಮುಂದಾಗಿವೆ.


Home add -Advt

Related Articles

Back to top button