
ಪ್ರಗತಿವಾಹಿನಿ ಸುದ್ದಿ: ನೇಪಾಳ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರೆದಿರುವ ಬೆನ್ನಲ್ಲೇ ಪ್ರಧಾನಿ ಹುದ್ದೆಗೆ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ಸಲ್ಲಿಸಿದ್ದಾರೆ.
ನೇಪಾಳದಲ್ಲಿ ಸೋಷಿಯಲ್ ಮೀಡಿಯಾ ನಿಷೇಧ ಮಾಡಿರುವ ಸರ್ಕಾರದ ಕ್ರಮ ಖಂಡಿಸಿ ಯುವ ಜನತೆ ರಾಷ್ಟ್ರವ್ಯಾಪಿ ಪ್ರತಿಭಟನೆ ಆರಂಭಿಸಿದ್ದರು. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 20 ಜನರು ಬಲಿಯಾಗಿದ್ದರು ನೂರಾರು ಜನರು ಗಾಯಗೊಂಡಿದ್ದರು. ಸಂಸತ್ ಹಾಗೂ ಪ್ರಧಾನಿ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು. ಘಟನೆ ಬೆನ್ನಲ್ಲೇ ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧವನ್ನು ಸರ್ಕಾರ ವಾಪಸ್ ಪಡೆದಿದೆ. ಆದಾಗ್ಯೂ ಸರ್ಕಾರದ ವಿರುದ್ಧ ಜನಾಕ್ರೋಶ ಮಾತ್ರ ಕಡಿವೆಯಾಗಿಲ್ಲ.
ಇಂದೂ ಕೂಡ ಕಠ್ಮಂಡುವಿನಲ್ಲಿ ಹಿಂಸಾಚಾರ, ಪ್ರತಿಭಟನೆ ಮುಂದುವರೆದಿದ್ದು, ಪ್ರಧಾನಿ ನಿವಾಸಕ್ಕೆ ಪ್ರತಿಭಟನಾಕರರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಪ್ರಧಾನಿ ಕೆ.ಪಿ.ಶರ್ಮಾ ಓಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.