
ಪ್ರಗತಿವಾಹಿನಿ ಸುದ್ದಿ: ನೇಪಾಳದಲ್ಲಿ ಸಂಭವಿಸ್ದ ಭೀಕರ ಬಸ್ ಅಪಘಾತದ;ಲಿ 7 ಜನರು ಬಹರತೀಯ ಯತರಿಕರು ಸಾವನ್ನಪ್ಪಿದ್ದಾರೆ.
ನೇಪಾಳದ ಗೂರ್ಖಾದ ಶಾಹಿದ್ ಲಖನ್ ಗ್ರಾಮೀಣ ಪುರಸಭೆ -3 ರ ಕಾಂಟಾರ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. 16 ಜನರಿದ್ದ ಎಲೆಕ್ಟ್ರಿಕ್ ಮೈಕ್ರೋ ಬಸ್, ಮನಕಾಮನಾ ದೇವಾಲಯದಿಂದ ಯಾತ್ರಿಕರನ್ನು ಕರೆತರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಸುಮಾರು 200 ಮೀಟರ್ ದೂರಕ್ಕೆ ಉರುಳಿಬಿದ್ದಿದೆ.
ಅಪಘಾತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಏಳು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.




