
ಪ್ರಗತಿವಾಹಿನಿ ಸುದ್ದಿ: ನೇಪಾಳದ ಮಾಜಿ ಪ್ರಧಾನಿ ಕೆ.ಪಿ ಶರ್ಮಾ ಒಲಿ ಅವರನ್ನು ಪೊಲಿಸರು ಬಂಧಿಸಿರುವ ಘಟನೆ ನಡೆದಿದೆ.
ಕಳೆದ ವರ್ಷ ನಡೆದ ಭ್ರಷ್ಟಾಚಾರ ವಿರೋಧಿ ಪ್ರತಿಭಟನೆಯ ವೇಳೆ 77 ಜನರ ಸಾವಿಗೆ ಕಾರಣವಾದ ಹಿಂಸಾಚಾರವನ್ನು ತಡೆಯುವಲ್ಲಿ ವಿಫಲರಾದ ಆರೋಪದ ಮೇಲೆ ಕೆ.ಪಿ.ಶರ್ಮಾ ಒಲಿ ಅವರನ್ನು ಬಂಧಿಸಲಾಗಿದೆ. ಬಾಲೆನ್ ಶಾ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ.
ಕಳೆದ ವರ್ಷ ನಡೆದ ಭ್ರಷ್ಟಾಚಾರ ವಿರೋಧಿ ‘ಜೆನ್ ಜಿ’ ಪ್ರತಿಭಟನೆಯ ವೇಳೆ ಕನಿಷ್ಠ 77 ಜನರ ಸಾವಿಗೆ ಕಾರಣವಾದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಲಿ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ. ಒಲಿ ಅವರೊಂದಿಗೆ ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನು ಸಹ ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರ ಓಂ ಅಧಿಕಾರಿ ಖಚಿತಪಡಿಸಿದ್ದಾರೆ.
ವಿಶೇಷ ನ್ಯಾಯಾಲಯದ ಮಾಜಿ ನ್ಯಾಯಾಧೀಶ ಗೌರಿ ಬಹದ್ದೂರ್ ಕಾರ್ಕಿ ನೇತೃತ್ವದ ತನಿಖಾ ಸಮಿತಿಯು ನೀಡಿದ ಶಿಫಾರಸಿನ ಮೇರೆಗೆ ಈ ಬಂಧನವಾಗಿದೆ.




