ಪ್ರಗತಿವಾಹಿನಿ ಸುದ್ದಿ; ತುಮಕೂರು: ಯುಜಿಸಿ ಆಯೋಜಿಸಿರುವ ನೆಟ್ (ನ್ಯಾಷನಲ್ ಎಲಿಜಿಬಲಿಟಿ ಟೆಸ್ಟ್) ಪರೀಕ್ಷೆ ಪ್ರಶ್ನೆ ಪತ್ರಿಕೆ ಎಡವಟ್ಟಿಗೆ ಅಭ್ಯರ್ಥಿಗಳು ಸಿಡಿದೆದ್ದಿದ್ದು, ಪರೀಕ್ಷೆ ಬಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಕನ್ನಡ ವಿಷಯಕ್ಕೆ ನಡೆದ ಪರೀಕ್ಷೆಯಲ್ಲಿ ಹಿಂದಿ ಭಾಷೆಯಲ್ಲಿ ಪ್ರಶ್ನೆಗಳು ಬಂದಿದ್ದು, ಪರೀಕ್ಷಾ ಹಾಲ್ ನಲ್ಲಿ ಕುಳಿತ ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆ ನೋಡಿ ದಂಗಾಗಿದ್ದಾರೆ. 10 ಪ್ರಶ್ನೆಗಳು ಮಾತ್ರ ಕನ್ನಡದಲ್ಲಿದ್ದು, ಉಳಿದ 90 ಪ್ರಶ್ನೆಗಳು ಹಿಂದಿ ಭಾಷೆಯಲ್ಲಿದ್ದು, ಅಭ್ಯರ್ಥಿಗಳು ಪರೀಕ್ಷೆ ಬಿಟ್ಟು ಪ್ರತಿಭಟನೆ ನಡೆಸಿದರು.
ತುಮಕೂರಿನ ಎಸ್ ಐಟಿ ಕಾಲೇಜಿನಲ್ಲಿ ನಡೆದಿದ್ದ ಪರೀಕ್ಷೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಅಭ್ಯರ್ಥಿಗಳು ಆಗಮಿಸಿದ್ದು, ಮರು ಪರೀಕ್ಷೆ ನಡೆಸುವಂತೆ ಆಗ್ರಹಿಸಿದ್ದಾರೆ.
ಬಳ್ಳಾರಿಯ ಬಿಐಟಿಎಂ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಕೂಡ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದ ಹೊರಗೆ ಪ್ರತಿಭಟನೆ ನಡೆಸಿದರು.
ಬೆಂಕಿಗೆ ಮನೆ ಆಹುತಿ: ಸ್ಥಳಕ್ಕೆ ತೆರಳಿ ಒಂದು ಲಕ್ಷ ರೂ. ನೆರವು ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ