
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ನೇತ್ರಾವತಿ ನದಿ ಸೇತುವೆಯ ಮೇಲೆ ಕಾರು ನಿಲ್ಲಿಸಿ ವ್ಯಕ್ತಿಯೊಬ್ಬ ನದಿಗೆ ಹಾರಿರುವ ಘಟನೆ ದಕ್ಷಣ ಕನ್ನಡ ಜಿಲ್ಲೆಯ ಮಂಗಳೂರು ಬಳಿಯ ತೊಕ್ಕೊಟ್ಟು ಬಳಿ ನಡೆದಿದೆ.
ಪ್ರಶಾಂತ್ (35) ನದಿಗೆ ಹಾರಿದವರು. ಚಿಕ್ಕಮಗಳೂರು ಮೂಲದ ಪ್ರಶಾಂತ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕುಟುಂಬ ಸಮೇತ ಬಂದಿದ್ದರು. ಕುಟುಂಬದವರನ್ನು ಆಸ್ಪತ್ರೆಯಲ್ಲಿ ಬಿಟ್ಟು ಕಾರಿನಲ್ಲಿ ನೇತ್ರಾವತಿ ನದಿ ಸೇತುವೆ ಬಳಿ ಬಂದಿದ್ದಾರೆ.
ಸೇತುವೆ ಮೇಲೆ ಕಾರು ನಿಲ್ಲಿಸಿ ಪ್ರಶಾಂತ್ ನದಿಗೆ ಹಾರಿದ್ದಾರೆ. ನದಿಯಲ್ಲಿ ಪ್ರಶಾಂತ್ ಗಾಗಿ ಪೊಲೀಸರು, ಈಜು ತಜ್ಞರು ಶೋಧ ನಡೆಸಿದ್ದಾರೆ. ಕಂಕನಾಡಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಮಗಳೂರು ಮೂಲದ ಪ್ರಶಾಂತ್ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಆಸ್ಪತ್ರೆಗೆ ಕುಟುಂಬದವರ ಜೊತೆ ಬಂದ ವ್ಯಕ್ತಿ ಇದ್ದಕ್ಕಿದ್ದಂತೆ ನದಿಗೆ ಹಾರಲು ಕಾರಣವೇನು ಎಂಬುದು ತಿಳಿದುಬಂದಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ