Latest

ಹೆತ್ತ ಮಗುವನ್ನೇ ಬ್ಲೇಡ್ ನಿಂದ ಕುಯ್ದು ಹತ್ಯೆ; ಮಹತ್ವದ ತೀರ್ಪು ನೀಡಿದ ನ್ಯಾಯಾಲಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೆತ್ತ ಮಗುವನ್ನು ಬ್ಲೇಡ್ ನಿಂದ ಕುಯ್ದು ಕೊಲೆಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾ ನ್ಯಾಯಾಲಯ ಮಹಿಳೆಗೆ ಜೀವಾವಧಿ ಶಿಕ್ಷೆ ಹಾಗೂ 15 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ.

ನವಜಾತ ಶಿವಿನ ಕತ್ತನ್ನು ಹೆತ್ತ ತಾಯಿಯೇ ಬ್ಲೇಡ್ ನಿಂದ ಕುಯ್ದು ಮಗು ಹತ್ಯೆಗೈದ ತಾಯಿಯ ಪ್ರಕರಣ ಇದಾಗಿದ್ದು, ಕಳೆದ 5 ವರ್ಷಗಳಿಂದ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತು. ಇದೀಗ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿನಯ್ ಅವರು ಅಪರಾಧಿ ಮಹಿಳೆ ಚಂದ್ರಮ್ಮಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಅಕ್ರಮ ಸಂಬಂಧದಿಂದ ಗರ್ಭಿಣಿಯಾಗಿದ್ದ ಚಿಕ್ಕಮಾಲಾಪುರದ ಚಂದ್ರಮ್ಮ, ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದಳು. 2015ರ ಮೇ 10 ರಂದು ಈಕೆಗೆ ಗಂಡು ಮಗು ಜನಿಸಿತ್ತು. ಆದರೆ ಅಂದೇ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಪರಾರಿಯಾಗಿದ್ದ ಚಂದ್ರಮ್ಮ, ಕರುಳಬಳ್ಳಿ ಕತ್ತರಿಸುವ ಬ್ಲೇಡ್‍ನಿಂದ ಮಗುವನ್ನು ಕೊಲೆ ಮಾಡಿ ಕಾಮಗೆರೆಯ ಹೋಲಿ ಕ್ರಾಸ್ ಆಸ್ಪತ್ರೆ ಎದುರಿನ ಪೂವಿನಕಟ್ಟೆ ಕೆರೆಗೆ ಎಸೆದು ಪರಾರಿಯಾಗಿದ್ದಳು.

ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಚಂದ್ರಮ್ಮಳ ಹಿರಿಯ ಮಗಳೇ ತಾಯಿಯ ವಿರುದ್ಧ ಸಾಕ್ಷ್ಯ ಹೇಳಿದ್ದಳು. ಇದೀಗ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಮಹಿಳೆಗೆ ಜೀವಾವಧಿ ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button