
ಪ್ರಗತಿವಾಹಿನಿ ಸುದ್ದಿ; ಹಾಸನ: ನವಜಾತ ಗಂಡು ಮಗುವನ್ನು ಅಪಹರಿಸಿರುವ ಘಟನೆ ಘಟನೆ ಹಾಸನ ಜಿಲ್ಲೆ ಅರಕಲಗೋಡು ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಮಧ್ಯರಾತ್ರಿ ನರ್ಸ್ ಸಮವಸ್ತ್ರದಲ್ಲಿ ಆಸ್ಪತ್ರೆ ಹಿಂಭಾಗಿಲಿನ ಮೂಲಕ ಬಂದ ಕಳ್ಳರು ಅಸ್ಸಾಂ ಮೂಲದ ಕೂಲಿ ಕಾರ್ಮಿಕ ಮಹಿಳೆಯ ಮಗುವನ್ನು ಕಿಡ್ನ್ಯಾಪ್ ಮಾಡಿ ಪರಾರಿಯಾಗಿದ್ದಾರೆ.
ಕಳ್ಳರ ಕೈಚಳಕ ಆಸ್ಪತ್ರೆಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಗು ಅಪಹರಣವಾಗಿರುವ ಬಗ್ಗೆ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ದೀಪಕ್ ಅರಕಲಗೋಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜೋಕಾಲಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ