ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಮೊದಲ ಸಭೆಯಲ್ಲಿಯೇ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದು, ಬೇಕಾಬಿಟ್ಟಿ ಕೆಲಸ ಮಾಡುವುದನ್ನು ಬಿಟ್ಟು ಸಮಯಕ್ಕೆ ಸರಿಯಾಗಿ ಯೋಜನೆಗಳು ಅನುಷ್ಠಾನಕ್ಕೆ ಬರುವಂತೆ ಕಾರ್ಯನಿರ್ವಹಿಸಿ ಎಂದು ಸೂಚಿಸಿದ್ದಾರೆ.
ಅಧಿಕಾರಿಗಳ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಬೊಮ್ಮಾಯಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪಬೇಕು. ಎಲ್ಲಾ ಇಲಾಖೆಗಳ ಜೊತೆ ಪರಸ್ಪರ ಸಮನ್ವಯತೆ ಇರಬೇಕು. ಅಧಿಕಾರಿಗಳು ಶೇ.5ರಷ್ಟು ಆನಗತ್ಯ ಖರ್ಚು ಕಡಿಮೆಮಾಡಿ ನಿಗದಿತ ಸಮಯದೊಳಗೆ ಯೋಜನೆಗಳು ಜಾರಿಗೆ ಬರುವಂತೆ ಕೆಲಸಮಾಡಿ ದಕ್ಷ, ಪ್ರಾಮಾಣಿಕ, ಜನಪರ ಆಡಳಿತ ನೀಡುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.
15 ದಿನಗಳೊಳಗಾಗಿ ಎಲ್ಲಾ ಇಲಾಖೆ ಯೋಜನೆಗಳು ಅನುಷ್ಠಾನಕ್ಕೆ ಬರಬೇಕು. ಫೈಲ್ ಕ್ಲೀಯರನ್ಸ್ ಡ್ರೈವ್ ಮಾಡಲು ನಿರ್ಧರಿಸಿದ್ದು, 15ದಿನಗಳಲ್ಲಿ ಫೈಲ್ ಕ್ಲೀಯರ್ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ