
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ರಾಜ್ಯ ಸರಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ರಾಜ್ಯದ ನೂತನ ಕಾಂಗ್ರೆಸ್ ಸರಕಾರಿ ಆದೇಶ ಹೊರಡಿಸಿದೆ.
ಶೇ.31ರಿಂದ 35ಕ್ಕೆ ಡಿಎ ಹೆಚ್ಚಳ ಮಾಡಲಾಗಿದೆ. ಇದು ಜನೆವರಿ 1ರಿಂದ ಪೂರ್ವಾನ್ವಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸರ್ಕಾರದ ಆದೇಶ ಸಂಖ್ಯೆ: ಆಇ ೧ ಎಸ್‌ಆರ್‌ಪಿ 2023 ಬೆಂಗಳೂರು, ದಿನಾಂಕ: 30ನೇ ಮೇ 2023
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2023 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 31 ರಿಂದ ಶೇಕಡ 35 ಕ್ಕೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ.
2. ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ’ ಎಂದರೆ ಸರ್ಕಾರಿ ನೌಕರನು ಧಾರಣ ಮಾಡಿರುವ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ, (ಅ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿ,
(ಅ) 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ) ಯನ್ನು ಓದಿಕೊಂಡು 7ನೇ ನಿಯಮದ (3)ನೇ ಉಪನಿಯದ ಮೇರೆಗೆ ಅವನಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ವೈಯಕ್ತಿಕ ವೇತನ,
(ಇ) ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ಅವನಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದಲ್ಲಿ, ಅವುಗಳು ಸೇರುತ್ತವೆ.
3. ಮೂಲ ವೇತನಕ್ಕೆ ಮೇಲೆ ಸೂಚಿಸಿರುವುದನ್ನು ಹೊರತುಪಡಿಸಿ ಇತರೆ ಯಾವುದೇ ಉಪಲಬ್ಧಗಳನ್ನು ಸೇರಿಸತಕ್ಕದ್ದಲ್ಲ.
4. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು/ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ದಿನಾಂಕ 1ನೇ ಜನವರಿ 2023 ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಶೇಕಡ 31 ರಿಂದ ಶೇಕಡ 35 ಕ್ಕೆ ಹೆಚ್ಚಿಸಿ ಮಂಜೂರು ಮಾಡಲು ಸಹ ಸರ್ಕಾರವು ಹರ್ಷಿಸುತ್ತದೆ.
5. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಅದೇಶಗಳು ಅನ್ವಯಿಸುತ್ತವೆ.
6. ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್‌ಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ರ್ಪಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ.
7. ಯುಜಿಸಿ/ಎಐಸಿಟಿಇ/ಐಸಿಎಆರ್/ಎನ್‌ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಟಿಪಿಸಿ, ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು,
8. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು,
9. ತುಟ್ಟಿಭತ್ಯಯ ಕಾರಣದಿಂದ ಸಂದಾಯ ಮಾಡಬೇಕಾಗಿರುವ ಐವತ್ತು ಪೈಸ ಹಾಗೂ ಅದಕ್ಕಿಂತ ಹೆಚ್ಚಿನ ಭಿನ್ನಾಂಕಗಳನ್ನು ಮುಂದಿನ ರೂಪಾಯಿಗೆ ಪೂರ್ಣಗೊಳಿಸತಕ್ಕದ್ದು ಮತ್ತು ಐವತ್ತು ಪೈಸೆಗಿಂತ ಕಡಿಮ ಇರುವ ಭಿನ್ನಾಂಶಗಳನ್ನು ಕಡೆಗಣಿಸತಕ್ಕದ್ದು.
10. ತುಟ್ಟಿಭತ್ಯೆ ಬಾಕಿ ಮೊತ್ತವನ್ನು, 2023ರ ಮೇ ಮಾಹೆಯ ವೇತನ ಬಟವಾಡೆಗೂ ಮೊದಲು ಪಾವತಿ ಮಾಡತಕ್ಕದ್ದಲ್ಲ.
11. ತುಟ್ಟಿಭತ್ಯೆಯನ್ನು ಸಂಭಾವನೆಯ ವಿಶಿಷ್ಟ ಅಂಶವಾಗಿ ತೋರಿಸುವುದು ಮತ್ತು ಯಾವುದೇ ಉದ್ದೇಶಕ್ಕಾಗಿ ಇದನ್ನು ವೇತನ ಎಂದು ಪರಿಗಣಿಸಲಾಗುವುದಿಲ್ಲ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ