
ಡಾ.ಸೋನಾಲಿ ಸರ್ನೋಬತ್ ಅವರ ನೇತೃತ್ವ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪಕ ಶ್ಯಾಮ್ ಪ್ರಸಾದ ಮುಖರ್ಜಿ ಅವರ ಜನ್ಮ ಶತಮಾನೋತ್ಸವ ಮತ್ತು ಬಲಿದಾನ ದಿನಾಚರಣೆ ಅಂಗವಾಗಿ ಬಿಜೆಪಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಅದರ ಅಂಗವಾಗಿ ಬೆಳಗಾವಿಯ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ಅವರ ನೇತೃತ್ವದಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹಿಂಡಲಗಾದ ವಿಠ್ಠಲ ರುಕ್ಮಿಣಿ ಮಂದಿರದ ಆವರಣದಲ್ಲಿ ಮತ್ತು ಹಿಂಡಲಗಾ ರುದ್ರಭೂಮಿಯಲ್ಲಿ ಗಿಡಗಳನ್ನು ನೆಡಲಾಯಿತು.
