ಜ.13ರಂದು 7 ನೂತನ ಸಚಿವರ ಪ್ರಮಾಣ ವಚನ – ಯಡಿಯೂರಪ್ಪ ಹೇಳಿಕೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಅಂತೂ ಬಹುದಿನಗಳಿಂದ ಕಾದಿದ್ದ ಸಚಿವ ಸಂಪುಟ ವಿಸ್ತರಣೆ ದಿನಾಂಕ ನಿಗದಿಯಾಗಿದೆ.

ಇದೇ 13ರಂದು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

Home add -Advt

ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಯಡಿಯೂರಪ್ಪ ವಿಮಾನ ನಿಲ್ದಾಣದಲ್ಲಿ ಈ ಮಾಹಿತಿ ನೀಡಿದರು.

7 ಸಚಿವರ ಪಟ್ಟಿಗೆ ಹೈಕಮಾಂಡ್ ಒಪ್ಪಿಗೆ ನೀಡಿದೆ ಎಂದೂ ಅವರು ತಿಳಿಸಿದ್ದಾರೆ.

ನಾವು ಅಂದುಕೊಂಡಂತೆ ಬಹುತೇಕ ಎಲ್ಲವೂ ಆಗಿದೆ. ಒಂದೆರಡು ವ್ಯತ್ಯಾಸವಿದೆ. ಅದನ್ನೆಲ್ಲ ಮಾಡಿ ಸಂಕ್ರಾಂತಿ ಮೊದಲ ದಿನವೇ ಸಂಜೆ ಪ್ರಮಾಣ ವಚನ ಕಾರ್ಯಕ್ರಮ ಇಟ್ಟುಕೊಳ್ಳುವುದಾಗಿ ಯಡಿಯೂರಪ್ಪ ತಿಳಿಸಿದರು.

ಇದಕ್ಕೂ ಮೊದಲು ದೆಹಲಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಅಮಿತ್ ಶಾ ರಾಜ್ಯ ಪ್ರವಾಸದ ನಂತರ ಸಂಪುಟ ವಿಸ್ತರಣೆ ಸಾಧ್ಯತೆ ಇದೆ ಎನ್ನುವ ಅರ್ಥದಲ್ಲಿ ಮಾತನಾಡಿದ್ದರು.

ಇದೀಗ ಬೆಂಗಳೂರಿನಲ್ಲಿ ಸ್ವಲ್ಪ ಹೊತ್ತಿನ ಮೊದಲು ಹೇಳಿಕೆ ನೀಡಿ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

7 ನೂತನ ಸಚಿವರು ಯಾರ್ಯಾರು ಎನ್ನುವುದು ಇನ್ನಷ್ಟೆ ಗೊತ್ತಾಗಬೇಕಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button