Election NewsKannada NewsKarnataka NewsPolitics
*ವಿಜಯೇಂದ್ರ ಹಾಗೂ ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ : ಕಾಂಗ್ರೆಸ್ ನ ಗ್ಯಾರೆಂಟಿ ಯೋಜನೆಗಳ ಬಗ್ಗೆ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ, ಬಿ ವೈ ವಿಜಯೇಂದ್ರ ಹಾಗೂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ಎಲ್ಲಾ ಗ್ಯಾರೆಂಟಿ ಯೋಜನೆಗಳನ್ನು ಜನರ ಹಿತಾಸಕ್ತಿಗೆ ಅನುಗುಣವಾಗಿ ಜಾರಿಗೊಳಿಸಿದೆ. ಆದರೆ ಬಿಜೆಪಿ ಮತ್ತು ಜೆಡಿಎಸ್‌ನವರು ತಮಗೆ ಅವಕಾಶ ಸಿಕ್ಕರೆ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಬಹಿರಂಗ ಹೇಳಿಕೆ ನೀಡುವ ಮೂಲಕ ಜನರಲ್ಲಿ ಗೊಂದಲ ಉಂಟುಮಾಡುತ್ತಿದ್ದಾರೆ. ಚುನಾವಣಾ ಆಯೋಗವು ರಾಜಕೀಯ ನಾಯಕರ ಹೇಳಿಕೆಗಳನ್ನು ನೀತಿ ಸಂಹಿತೆ ಅಡಿ ಪರಿಶೀಲನೆ ಮಾಡುತ್ತಿದ್ದರೂ ಈ ಹೇಳಿಕೆಗಳನ್ನು ಇಲ್ಲಿಯವರೆಗೆ ಗಂಭೀರವಾಗಿ ಪರಿಗಣಿಸಿಲ್ಲ. ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಜೆಡಿಎಸ್ ಮತ್ತು ಬಿಜೆಪಿ ನಾಯಕರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮನವಿ ಮಾಡಿದೆ.