
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶಾದ್ಯಂತ ಕೊರೊನಾ ಲಾಕ್ ಡೌನ್ ಮುಂದುವರೆದಿದ್ದು, ಜನಸಾಮಾನ್ಯರು ಸಂಕಷ್ಟಕ್ಕೀಡಾಗಿದ್ದಾರೆ. ಈ ಮಧ್ಯೆ ನವ ವಿವಾಹಿತ ಜೋಡಿಯೊಂದು ಬಾಡಿಗೆ ಮನೆಯೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇಲ್ಲಿನ ಶ್ರೀರಾಮಪುರದ ದಯಾನಂದ ರಸ್ತೆಯಲ್ಲಿನ ಮನೆಯಲ್ಲಿ ನಡೆದಿದೆ. ರಾಹುಲ್ (30), ರಾಣಿ(26) ಆತ್ಮಹತ್ಯೆಗೆ ಶರಣಾದ ನವ ದಂಪತಿ. ಇವರು ಬಿಹಾರ ಮೂಲದವರಾಗಿದ್ದು ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಬಂದು ನೆಲೆಸಿದ್ದರು. ಬಾಡಿಗೆ ಮನೆಯ ಎರಡನೆ ಮಹಡಿ ಮನೆಯ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೃಹಿಣಿ ರಾಣಿ ಶವ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದರೆ ರಾಹುಲ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಶನಿವಾರ ರಾತ್ರಿ ಬಾಡಿಗೆ ನೀಡಿದ್ದ ಮನೆ ಮಾಲೀಕರು ವಿದ್ಯುತ್ ಬಿಲ್ ನೀಡಲು ತೆರಳಿದ್ದಾಗ ಘಟನೆ ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಶ್ರೀರಾಮಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ