
ಪ್ರಗತಿವಾಹಿನಿ ಸುದ್ದಿ: ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿ ವಿರುದ್ಧ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ಈ ಘಟನೆ ನಡೆದಿದೆ. 30 ವರ್ಷದ ಹರೀಶ್ ಆತ್ಮಹತ್ಯೆಗೆ ಶರಣಾದ ಯುವಕ. ನನ್ನ ಸಾವಿಗೆ ಪತ್ನಿ ವರ್ತನೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂದಿದ್ದಾನೆ.
ತನ್ನ ಪತ್ನಿ ಬೇರೊಬ್ಬ ಯುವಕನೊಂದಿಗೆ ಮಾತನಾಡುತ್ತಿರುತ್ತಾಳೆ. ಅಕೆಯ ನಡತೆಯ ಬಗ್ಗೆ ಅನುಮಾನವಿದೆ. ಅಲ್ಲದೇ ತನಗೆ ಕಿರುಕುಳ ನೀಡುತ್ತಿದ್ದಾಳೆ. ಆಕೆಯ ಸಂಬಂಧಿಕರಿಂದ ನನಗೆ ಜೀವಬೆದರಿಕೆಯಿತ್ತು. ಪತ್ನಿ, ಆಕೆಯ ತಂದೆ-ತಾಯಿ, ಚಿಕ್ಕಪ್ಪನಿಗೆ ಜೀವಾವಧಿ ಶಿಕ್ಷೆಯಾಗಲಿ ಎಂದು ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾನೆ.
ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


