ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಕಾವು ಎಲ್ಲೆಡೆ ಹೆಚ್ಚುತ್ತಿದ್ದು, ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಆಗುತ್ತಾರೆ ಎಂಬ ಚರ್ಚೆಗಳು ನಿರಂತರವಾಗಿ ನಡೆಯುತ್ತಿದೆ. ಆದರೆ ಮುಂದಿನ ಪ್ರಧಾನಿ ರಾಹುಲ್ ಗಾಂಧಿ ಆಗುತ್ತಾರೆ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೊಸ ಬಾಂಬ್ ಸಿಡಿಸಿದ್ದಾರೆ.
ಹೊಸಪೇಟೆಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, “ಓನ್ಲಿ ಒನ್ ರಾಹುಲ್ ಗಾಂಧಿ” ಪ್ರಧಾನಿ ಆಗುತ್ತಾರೆ. ಎನ್ನುವ ಮೂಲಕ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಮುಂದುವರೆದು ಮಾತನಾಡಿದರುವ ಅವರು, ರಾಮುಲು ರಾಜಕೀಯ ಪುನರ್ಜನ್ಮ ಕೊಡಿ ಅಂತ ಕೇಳುತ್ತಿದ್ದಾರೆ. ರಾಮುಲು ಸೋಲನ್ನು ಒಪ್ಪಿದ್ದಾರೆ ಅಂತಲೇ ಅರ್ಥ ಆಗುತ್ತೆ. ಕಾಂಗ್ರೆಸ್ ಅಭ್ಯರ್ಥಿ ತುಕಾರಂ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ತಿಳಿಸಿದರು.
ಬಳ್ಳಾರಿ ಜನ ಈ ಭಾರಿ ತಿರ್ಮಾನ ಮಾಡಿದ್ದಾರೆ. ನಾನು ಬೇರೆ ಬೇರೆ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದೇನೆ. ಎಲ್ಲಾ ಜಿಲ್ಲೆಗಳಲ್ಲಿ ಜನ ಬದಲಾವಣೆ ಬಯಸಿದ್ದಾರೆ. ಸಿಎಂ ಆದಾಗ ಇರೋ ಪ್ರಧಾನಿ ಮೋದಿ ವರ್ಚಸ್ಸು ಈಗಿಲ್ಲ. ಅಸೆಂಬ್ಲಿ ಚುನಾವಣೆ ವೇಳೆ 130 ಸೀಟು ಗೆಲ್ಲುತ್ತೇವೆ ಅಂತ ಹೇಳಿದ್ದೆ. ಅದರಂತೆ 136 ಸೀಟು ಕಾಂಗ್ರೆಸ್ ಗೆದ್ದಿದೇವೆ. ಲೋಕಸಭಾ ಚುನಾವಣೆ ವೇಳೆ ನಿರೀಕ್ಷೆ ಮೀರಿ ಫಲಿತಾಂಶ ಬರಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 23 ರಿಂದ 25 ಸೀಟು ಗೆದ್ದೆ ಗೆಲ್ಲುತ್ತದೆ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ