Kannada NewsLatestNational

*ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮಹಿಳೆ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ತನಿಖೆಯನ್ನು ಕೇಂದ್ರ ತನಿಖಾ ದಳ(ಸಿಬಿಐ)ಗೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಂಧಿತ ಮಹಿಳೆಯನ್ನು ಸಿಬಿಐಗೆ ಒಪ್ಪಿಸಲಾಗಿದೆ.

Home add -Advt

ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಅವರು ಈ ಕುರಿತು ಮಾತನಾಡಿ, ಬಿಬ್ವೆವಾಡಿಯಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ನಾವು ಆಕೆಯನ್ನು ಪ್ರಶ್ನಿಸಿ ಹೆಚ್ಚಿನ ತನಿಖೆಗಾಗಿ ಸಿಬಿಐಗೆ ಒಪ್ಪಿಸಿದ್ದೇವೆ ಎಂದು ತಿಳಿಸಿದರು.

ಮೇ 3ರಂದು ನಡೆದ ನೀಟ್‌–ಯುಜಿ 2026 ಪರೀಕ್ಷೆ ರದ್ದುಗೊಳಿಸಲು ಕಾರಣವಾದ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಈ ಮಹಿಳೆಯ ಪಾತ್ರವೇನು ಎಂಬುದರ ಕುರಿತು ಮಾಹಿತಿ ನೀಡಲು ಕುಮಾರ್ ನಿರಾಕರಿಸಿದ್ದಾರೆ.

ಮತ್ತೊಂದೆಡೆ, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಸಿಕ್ ಪೊಲೀಸರು ಮಂಗಳವಾರ ಶಂಕಿತ ಆರೋಪಿಯನ್ನು ಬಂಧಿಸಿದ್ದರು.

“ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯುವಂತೆ ರಾಜಸ್ಥಾನ ಪೊಲೀಸರಿಂದ ಮನವಿ ಬಂತು. ಅದರಂತೆ, ನಾಸಿಕ್ ಪೊಲೀಸ್ ಅಪರಾಧ ವಿಭಾಗವು ಕಾರ್ಯಾಚರಣೆ ನಡೆಸಿ ಶಂಕಿತ ವ್ಯಕ್ತಿಯನ್ನು ಬಂಧಿಸಿದೆ.


Related Articles

Back to top button