ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ 6ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.
ಕಡಲೂರಿನಲ್ಲಿರುವ ಸರ್ಕಾರಿ ಸ್ವಾಮ್ಯದ ನೇವೆಲಿ ಲಿಗ್ನೈಟ್ ಪ್ಲಾಂಟ್ನಲ್ಲಿ ಈ ಸ್ಫೋಟ ಸಂಭವಿಸಿದೆ. ಘಟನೆ ವೇಳೆ ಸಾಕಷ್ಟು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಸ್ಫೋಟದ ರಭಸಕ್ಕೆ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.
ಸ್ಫೋಟಗೊಂಡ ಬಾಯ್ಲರ್ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆದಾಗ್ಯೂ ಇದು ಹೇಗೆ ಸ್ಫೋಟಗೊಂಡಿದೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿರುವದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಎರಡು ತಿಂಗಳ ಅವಧಿಯಲ್ಲಿ ಇದು ಎರಡನೇ ಬಾಯ್ಲರ್ ಸ್ಫೋಟವಾಗಿದೆ. ಮೇ ತಿಂಗಳಲ್ಲಿ ಈ ಪ್ಲಾಂಟ್ನಲ್ಲಿ ಬಾಯ್ಲರ್ ಸ್ಫೋಟಗೊಂಡು 6 ಜನರಿಗೆ ಗಂಭೀರ ಗಾಯಗಳಾಗಿದ್ದವು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ