Latest

*ಉಚಿತ ರೋಗ ಪತ್ತೆ ಮತ್ತು ಉಚಿತ ಔಷಧಿ ಸೇವೆಗಳ ಕಾರ್ಯಕ್ರಮ: ಆರೋಗ್ಯ ಪ್ರಯೋಗಶಾಲೆಗಳ ಪರಿಕರ ಖರೀದಿಗೆ ಅನುಮೋದನೆ*

ಪ್ರಗತಿವಾಹಿನಿ ಸುದ್ದಿ: 2024-25ನೇ ಸಾಲಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಉಚಿತ ರೋಗ ಪತ್ತೆ ಮತ್ತು ಉಚಿತ ಔಷಧಿ ಸೇವೆಗಳ (NFDS) ಕಾರ್ಯಕ್ರಮದ ಅಡಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಹಾಗೂ ರಾಜ್ಯ ಮಟ್ಟದ ಆಸ್ಪತ್ರೆಗಳಲ್ಲಿನ ಪ್ರಯೋಗಾಲಯ ಉಪಕರಣಗಳಿಗೆ reagents, Consumables & rapid diagnostic kits ಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುಮೋದಿತ ಅನುದಾನ ರೂ.19.70 ಕೋಟಿ ವೆಚ್ಚದಲ್ಲಿ ಖರೀದಿಸಿ ಸರಬರಾಜು ಮಾಡಲು; ಸಚಿವ ಸಂಪುಟ ಅನುಮೋದನೆ ನೀಡಿದೆ

ಗ್ರಾಮಾಂತರ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ 63 ಪ್ರಯೋಗಶಾಲಾ ಪರೀಕ್ಷೆಗಳು. ಸಮುದಾಯ ಆರೋಗ್ಯ ಕೇಂದ್ರಗಳ ಮಟ್ಟದಲ್ಲಿ 97 ಪ್ರಯೋಗಶಾಲಾ ಪರೀಕ್ಷೆಗಳು. ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆ ಮಟ್ಟದಲ್ಲಿ 111 ಪ್ರಯೋಗಶಾಲಾ ಪರೀಕ್ಷೆಗಳು. ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ 134 ಪ್ರಯೋಗಶಾಲಾ ಪರೀಕ್ಷೆಗಳನ್ನು ನಡೆಸಲಾಗಿದೆ.

Home add -Advt

Related Articles

Back to top button