Latest

ರಾಜ್ಯದಲ್ಲಿ ನಿಷೇಧಿತ PFI ಮುಖಂಡರ ಮೇಲೆ ಮತ್ತೆ NIA ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು, ನಿಷೇಧಿತ ಪಿಎಫ್ ಐ ಸಂಘಟನೆ ಮುಖಂಡರ ನಿವಾಸಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಸುಳ್ಯ, ಮೈಸೂರು, ಹುಬ್ಬಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರಿನಲ್ಲಿ ಪಿಎಫ್ ಐ ಮಾಜಿ ಕಾರ್ಯದರ್ಶಿ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಹುಬ್ಬಳ್ಲಿಯಲ್ಲಿ ನುರಾನಿ ಪ್ಲಾಟ್ ನಲಿರುವ ಎಸ್ ಡಿಪಿ ಐ ಮುಖಂಡ ಇಸ್ಮಾಯಿಲ್ ನಾಲಬಂದ್ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ರಾಜ್ಯದ ವಿವಿಧೆಡೆ ಎನ್ ಐಎ ಅಧಿಕಾರಿಗಳಿಂದ ಶೋಧ ಮುಂದುವರೆದಿದೆ.

ವೈದ್ಯರ ನಿರ್ಲಕ್ಷ; ಮತ್ತೊಂದು ಮಗು ಸಾವು

https://pragati.taskdun.com/latest/4-years-boy-dethindira-gandhi-hiospitalfamily-protest/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button