ಪ್ರಗತಿವಾಹಿನಿ ಸುದ್ದಿ: ಅಲ್ ಖೈದ ಉಗ್ರ ಸಂಘಟನೆ ಜೊತೆಗೆ ನಂಟು ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ 9 ರಾಜ್ಯಗಳಲ್ಲಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ನಂಟು ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ, ಜಮ್ಮು ಕಾಶ್ಮೀರ, ಪಶ್ಚಿಮ ಬಂಗಾಳ, ತ್ರಿಪುರ, ಬಿಹಾರ ಮತ್ತು ಅಸ್ಸಾಂ ಸೇರಿದಂತೆ 9 ಕಡೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದು, ಮಹತ್ವದ ದಾಖಲೆಯನ್ನು ವಶಪಡಿಸಿಕೊಂಡಿದ್ದಾರೆ.
ಬ್ಯಾಂಕಿಂಗ್ ವಹಿವಾಟುಗಳು, ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಿದ್ದು, ಡಿಜಿಟಲ್ ಸಾಧನಗಳು ಮತ್ತು ಇತರ ಸಾಕ್ಷ್ಯಗಳು ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ನಿಧಿ ಸಂಗ್ರಹಣೆಗೆ ಸಂಬಂಧಿಸಿದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.
ಕಳೆದ ವರ್ಷ ನವೆಂಬರ್ನಲ್ಲಿ, ನಾಲ್ವರು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಐವರು ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿತ್ತು. ಈ ಪ್ರಕರಣದ ಮುಂದುವರೆದ ತನಿಖೆಯ ಭಾಗವಾಗಿ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ