Latest

ನಾಳೆ 7-8 ಸಚಿವರ ಪ್ರಮಾಣವಚನ ಸ್ವೀಕಾರ; ಸಿಎಂ ಬಿಎಸ್ ವೈ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ನಾಳೆ 3:50ಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ನಾಳೆ 3:30ಕ್ಕೆ ರಾಜಭವನಕ್ಕೆ ಬರುವಂತೆ ಸೂಚನೆ ನೀಡಲಾಗಿದೆ. ನಾಳೆ 3:50ಕ್ಕೆ 7-8 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.
ಎಂಟಿಬಿ ನಾಗರಾಜ್, ಆರ್.ಶಂಕರ್, ಮುನಿರತ್ನ, ಉಮೇಶ್ ಕತ್ತಿ, ಸಿ.ಪಿ.ಯೊಗೇಶ್ವರ್, ಮುರುಗೇಶ್ ನಿರಾಣಿ, ಎಸ್.ಅಂಗಾರ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡುವುದು ಬಹುತೇಕ ಖಚಿತವಾಗಿದ್ದು, ನಾಳೆ ಒಂದು ಸಚಿವ ಸ್ಥಾನ ಖಾಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ. ಅಲ್ಲದೇ  ಓರ್ವ ಸಚಿವರ ರಾಜೀನಾಮೆ ಪಡೆದುಕೊಳ್ಳುವ ಸಾಧ್ಯತೆ ಕೂಡ ದಟ್ಟವಾಗಿದೆ.

ಇಂದು ಸಂಜೆ ನೂತನ ಸಚಿವರ ಪಟ್ಟಿ ಬಿಡುಗಡೆ

Home add -Advt

Related Articles

Back to top button