
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಜೈಲಿನಲ್ಲಿ ಉಗ್ರರಿಗೆ ನೆರವು ನೀಡುತ್ತಿದ್ದ ಮೂವರು ಶಂಕಿತರನ್ನು ಬಂಧಿಸಿದ್ದಾರೆ.
ಬೆಂಗಳೂರು, ಕೋಲಾರದಲ್ಲಿ ತಡ ರಾತ್ರಿ ಎನ್ ಐಎ ತಂಡ ದಿಢೀರ್ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಮನೋವೈದ್ಯ ಡಾ.ನಾಗರಾಜ್, ಪರಪ್ಪನ ಅಗ್ರಹಾರ ಜೈಲಿನ ಎ ಎಸ್ ಐ ಚಾಂದ್ ಪಾಷಾ, ಹಾಗೂ ಶಂಕಿತ ಉಗ್ರನ ತಾಯಿ ಅನೀಸ್ ಫಾತಿಮಾ ಬಂಧಿತರು.
ಈ ಮೂವರೂ ಮಂಗಳೂರಿನ ಕುಕ್ಕರ್ ಬಾಂಬ್, ಶಿವಮೊಗ್ಗದಲ್ಲಿ ಉಗ್ರರ ಚಟುವಟಿಕೆ, ರಾಮೇಶ್ವರಂ ಕೆಫೆ ಸ್ಫೋಟ ಸೇರಿದಂತೆ ದಕ್ಷಿಣ ಭಾರತದಲ್ಲಿ ಸಂಭವಿಸಿದ ಹಲವು ಸ್ಫೋಟಗಳ ಮಾಸ್ಟರ್ ಮೈಂಡ್ ನಾಸೀರ್ ಜೊತೆ ಪ್ರಬಲ ಸಂಪರ್ಕ ಹೊಂದಿದ್ದರು ಎಂದು ತಿಳಿದುಬಂದಿದೆ.