ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎನ್ ಐಎ ಅಧಿಕಾರಿಗಳು ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ 44 ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಓರ್ವ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ.
ಎನ್ ಐ ಎ ತಂಡ ಬೆಂಗಳೂರಿನಲ್ಲಿ ನಡೆಸಿದ ದಾಳಿಯಲ್ಲಿ ಓರ್ವ ಶಂಕಿತನನ್ನು ಬಂಧಿಸಿದ್ದು, ಐಸಿಸ್ ಉಗ್ರರ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಬಂಧಿತ ಬೆಂಗಳೂರಿನಲ್ಲಿ ಉರ್ದು ಶಾಲೆ ನಡೆಸುತ್ತಿದ್ದ. ಬಂಧಿತನಿಂದ 16 ಲಕ್ಷದ 42 ಸಾವಿರ ನಗದು ಜಪ್ತಿ ಮಾಡಲಾಗಿದೆ. ಇನ್ನು ಎನ್ ಐಎ ತಂಡಪುಣೆಯ 2 ಥಾಣೆ ಗ್ರಾಮಾಂತರದಲ್ಲಿ 31, ಥಾಣೆ ನಗರ 9 ಹಾಗೂ ಭಾಯಂದರ್ ನಲ್ಲಿ ಒಂದು ಸ್ಥಳಗಳಲ್ಲಿ ದಾಳಿ ನಡೆಸಿ ಪರಿಸೀಲನೆ ನಡೆಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ