*NIAಯಿಂದ PFI ಕಚೇರಿ ಸಂಪೂರ್ಣ ಜಪ್ತಿ*

ಪ್ರಗತಿವಾಹಿನಿ ಸುದ್ದಿ;ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ರಾಷ್ಟ್ರೀಯ ತನಿಖಾ ದಳ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿನ ಪಿಎಫ್ ಐ ಕಚೇರಿಯನ್ನು ಜಪ್ತಿ ಮಾಡಿದೆ.

ಸುಳ್ಯ ತಾಲೂಕಿನ ಗಾಂಧಿನಗರ ಅಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿರುವ ಕಚೇರಿಯನ್ನು ಜಪ್ತಿ ಮಾಡಲಾಗಿದೆ.

Home add -Advt

ರಾಷ್ಟ್ರೀಯ ತನಿಖಾ ದಳದ ವಶದಲ್ಲಿರುವ ಸುಳ್ಯ ಪಿಎಫ್ ಐ ಕಚೇರಿ ಇದ್ದ ಜಾಗವನ್ನು ಪರಬಾರೆ ಮಾಡುವಂತಿಲ್ಲ. ಬಾಡಿಗೆ, ಲೀಜ್ ಕೊಡುವಂತಿಲ್ಲ. ಅಲ್ಲಿರುವ ಯಾವುದೇ ಆಸ್ತಿ ಸಾಗಿಸುವ ಅಥವಾ ನವೀಕರಣ ಮಾಡುವಂತಿಲ್ಲ ಎಂದು ತಿಳಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಸಂಚು ಇದೇ ಕಚೇರಿಯಲ್ಲಿ ಮಾಡಲಾಗಿತ್ತು ಎನ್ನಲಾಗಿದೆ.

Related Articles

Back to top button