*ನೈಸ್ ಸಂಸ್ಥೆಗೆ ನೀಡಿದ್ದ 554 ಎಕರೆ ಜಮೀನು ಶೀಘ್ರದಲ್ಲಿ ಹಿಂಪಡೆಯಲಾಗುವುದು: ಸಚಿವ ಶರಣ ಬಸಪ್ಪ ದರ್ಶನಾಪುರ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ ಸುವರ್ಣ ಸೌಧ: ಕರ್ನಾಟಕ ಕೈಗಾರಿಕ ಪ್ರದೇಶಾಭಿವೃಧ್ದಿ ಮಂಡಳಿಯು ನೈಸ್ ಸಂಸ್ಥೆಗೆ ನೀಡಿದ್ದ 554 ಎಕರೆ ಹೆಚ್ಚವರಿ ಜಮೀನನ್ನು ಶೀಘ್ರವಾಗಿ ಹಿಂಪಡೆಯುವ ಕುರಿತಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಶರಣ ಬಸಪ್ಪ ದರ್ಶನಾಪುರ ಹೇಳಿದರು.
ವಿಧಾನ ಪರಿಷತ್ ಮಂಗಳವಾರ ಸದಸ್ಯ ಎಸ್. ಮುನಿರಾಜು ಗೌಡ ಪಿಎಂ ಕೇಳಿದ ಚುಕ್ಕೆಗುರಿತನ ಪ್ರಶ್ನೆ 25 ಕ್ಕೆ , ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃಧ್ದಿ ಸಚಿವರ ಪರವಾಗಿ ಅವರು ಉತ್ತರಿಸಿದರು. ಬಿಎಂಐಸಿಪಿ ಯೋಜನೆಗಾಗಿ ಸ್ವಾಧೀನ ಪಡಿಸಿಕೊಳ್ಳಲಾದ ಜಮೀನುಗಳ ಪೈಕಿ 554 ಎಕರೆ ಹೆಚ್ಚುವರಿ ಜಮೀನುಗಳನ್ನು ಹಿಂಪಡೆಯುವ ಕುರಿತಂತೆ , ಹೆಚ್ಚುವರಿಯಾಗಿ ಸ್ವಾಧೀನಪಡಿಸಿಕೊಂಡಿರುವ ಜಮೀನುಗಳನ್ನು ಗುರುತಿಸಿ ಸರ್ವೇ ನಂ ಗಳೊಂದಿಗೆ ವಿವರವಾದ ಮಾಹಿತಿ ಸಲ್ಲಿಸುವಂತೆ ಮುಖ್ಯ ಇಂಜಿನಿಯರ್, ಸಂಪರ್ಕ ಮತ್ತು ಕಟ್ಟಡ ( ದಕ್ಷಿಣ) ಇವರಿಗೆ ಪತ್ರದ ಮೂಲಕ ತಿಳಿಸಿದ್ದು, ಇವರಿಂದ ಮಾಹಿತಿ/ ಸ್ಪಷ್ಟವಾದ ವರದಿ ಪಡೆದು ಹೆಚ್ಚುವರಿ ಭೂಮಿಯನ್ನು ಹಿಂಪಡೆಯಲು ನಿಯಮಾನುಸಾರ ಪರಿಶೀಲಿಸಿ ಕ್ರಮ ವಹಿಸಲಾಗುವುದು ಹಾಗೂ ಸದ್ರಿ ಬೂಮಿಯನ್ನು ಹಿಂಪಡೆದ ನಂತರ ಯಾವ ಉದ್ದೇಶಕ್ಕೆ ಬಳಸಬೇಕು ಎಂಬುದನ್ನು ಪರಿಶೀಲಿಸಲಾಗುವುದು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ