Kannada NewsLatest

ನಿಡಸೋಸಿ ಶ್ರೀಗಳ ಕಾರು ಭೀಕರ ಅಪಘಾತ: ನಜ್ಜುಗುಜ್ಜಾದ ಕಾರು; ಶ್ರೀಗಳಿಗೆ ಗಾಯ

 

ಪ್ರಗತಿವಾಹಿನಿ ಸುದ್ದಿ, ಸಂಕೇಶ್ವರ : ಧಾರವಾಡ  ಹೊರವಲಯದ ತೇಗೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದ್ದು, ಕಾರ್ ಪಲ್ಟಿಯಾಗಿ ನುಜ್ಜುಗುಜ್ಜಾದರೂ ಸಹ ಏರಬ್ಯಾಗ್ ಇದ್ದಿದ್ದರಿಂದ ಅದೃಷ್ಟವಶಾತ್ ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ

ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಹಿಂದಿರುಗುವಾಗ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಕಾರು ಅಪಘಾತವಾಗಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ವಾಮೀಜಿ ಕಾಲಿಗೆ ಸ್ವಲ್ಪ ಏಟು ಬಿದ್ದಿದ್ದು, ಕೆಎಲ್‌ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Home add -Advt

 

ಕಾರಿನಲ್ಲಿದ್ದ ಚಾಲಕ ರಮೇಶ ಮಾಳಿ ಸೇರಿದಂತೆ ಇಬ್ಬರು ಆಪ್ತ ಸಹಾಯಕರು ಸಹ ಕಾರಿನಲ್ಲಿದ್ದರು. ಸಣ್ಣ ಪುಟ್ಟ ಗಾಯ ಹೊರತುಪಡಿಸಿದರೆ ಯಾವುದೇ ಗಂಭೀರ ಪ್ರಮಾಣದ ಗಾಯಗಳಾಗಿಲ್ಲ ಎಂದು ಶ್ರೀಮಠದ ಸದ್ಭಕ್ತ ಮಂಡಳಿ ತಿಳಿಸಿದೆ.

ಭಕ್ತ ವಲಯದಲ್ಲಿ ಆತಂಕ:
ಗಡಿಭಾಗದಲ್ಲಿ ಅಪಾರ ಭಕ್ತ ಸಮೂಹ ಹೊಂದುವ ಜೊತೆಗೆ ಸರಳತೆಯ ಮೂಲಕ ಉತ್ತರ ಕರ್ನಾಟಕದ ನಡೆದಾಡುವ ದೇವರು ಅಂತಲೇ ಪ್ರಖ್ಯಾತಿ ಪಡೆದಿರುವ ಜಗದ್ಗುರು ಪಂಚಮ ಶಿವಲಿಂಗೇಶ್ವರ ಕಾರು ಅಪಾಘತವಾಗಿರುವ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದಂತೆ ಭಕ್ತ ವಲಯದಲ್ಲಿ ಆತಂಕ ಮನೆ ಮಾಡಿತ್ತು. ಆದರೆ ಶ್ರೀಗಳು ಕ್ಷೇಮವಾಗಿದ್ದರೆ ಎನ್ನುವ ಸುದ್ದಿ ಭಕ್ತರ ಆತಂಕವನ್ನು ಕಡಿಮೆಗೊಳಿಸಿದೆ. ನಿಡಸೋಸಿ ಶ್ರೀಮಠ ಹಾಗೂ ಬಾಗಲಕೋಟ ಚರಂತಿಮಠದ ಪೀಠಾಧಿಪತಿಗಳಾಗಿರುವ ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿರುವ ಸುದ್ದಿ ತಿಳಿದು ಭಕ್ತರು ಶ್ರೀಮಠದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಆರೋಪಿ ಪತ್ನಿ ಹೇಳಿದ್ದೇನು?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button