
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ತೇಗೂರ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಕಾರು ಪಲ್ಟಿಯಾಗಿ ಗಾಯಗೊಂಡಿದ್ದ ನಿಡಸೋಸಿ ಮಠದ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಿಂದ ಡಿಸ್ಚಾರ್ಜ ಆಗಿದ್ದಾರೆ.
ಹುಬ್ಬಳ್ಳಿಯಲ್ಲಿ ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ ಮುಗಿಸಿ ಬರುತ್ತಿದ್ದ ವೇಳೆ ನಿಡಸೋಸಿ ಸ್ವಾಮೀಜಿ ಕಾರು ಪಲ್ಟಿಯಾಗಿತ್ತು. ಸ್ವಾಮೀಜಿ ಜೊತೆ ಅವರ ಸಹಾಯಕರು, ಚಾಲಕ ಸೇರಿ ಐವರು ಪ್ರಯಾಣಿಸುತ್ತಿದ್ದರು. ಈ ವೇಳೆ ಯಾರಿಗೂ ಗಂಭೀರ ಗಾಯವಾಗಿರಲಿಲ್ಲ.
ತಕ್ಷಣವೇ ಸ್ವಾಮೀಜಿ ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ತಪಾಸಣೆ ಬಳಿಕ ನಿಡಸೋಸಿ ಸ್ವಾಮೀಜಿ ಅವರನ್ನು ಡಿಸ್ಚಾರ್ಜ ಮಾಡಲಾಯಿತು.
ಈ ವೇಳೆ ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಸ್ವಾಮೀಜಿ, ಮಾಜಿ ಸಂಸದ ರಮೇಶ ಕತ್ತಿ ಅವರು ಸ್ವಾಮೀಜಿ ಅವರನ್ನು ನಿಡಸೋಸಿ ಮಠಕ್ಕೆ ಕರೆದುಕೊಂಡು ಹೋದರು. ಸ್ವಾಮೀಜಿ ಆಸ್ಪತ್ರೆಯಿಂದ ಡಿಸ್ಚಾರ್ಜ ಆಗಿದ್ದರಿಂದ ಭಕ್ತರು ನಿರಾಳರಾಗಿದ್ದಾರೆ.
ನಿಡಸೋಸಿ ಶ್ರೀಗಳ ಕಾರು ಭೀಕರ ಅಪಘಾತ: ನಜ್ಜುಗುಜ್ಜಾದ ಕಾರು; ಶ್ರೀಗಳಿಗೆ ಗಾಯ