Kannada NewsKarnataka NewsLatest

*ನಿಗಮ ಮಂಡಳಿ ಪಟ್ಟಿ ಇಂದೇ ಫೈನಲ್ ಸಾಧ್ಯತೆ; ಯಾರಿಗೆಲ್ಲ ಸ್ಥಾನ ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಇಂದು ಬೆಂಗಳೂರಿಗೆ ಆಗಮಿಸಿದ್ದು, ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ವಿಚಾರವಾಗಿ ಮಹತ್ವದ ಸಭೆ ನಡೆಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಇಂದು ಮಧ್ಯಾಹ್ನ 2;30ಕ್ಕೆ ರಣದೀಪ್ ಸಿಂಗ್ ಸುರ್ಜೇವಾಲಾ ಸಭೆ ನಡೆಸಲಿದ್ದು, ಸಭೆಯಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆ ಇದೆ.

Home add -Advt

ಶಾಸಕರಿಗೆ, ಕಾರ್ಯಕರ್ತರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಬೇಕು ಎಂಬುದು ರಾಜ್ಯ ಕಾಂಗ್ರೆಸ್ ನ ಹಲವು ಹಿರಿಯ ನಾಯಕರ ಅಭಿಪ್ರಾಯವಾಗಿದ್ದು, ಈ ನಿಟ್ಟಿನಲ್ಲಿ 25 ಶಾಸಕರ ಪಟ್ಟಿ ಸಿದ್ಧಪಡಿಸಲಾಗಿದೆ ಎನ್ನಲಾಗಿದೆ.

ಶಾಸಕರಾದ ಬಸವರಾಜ್ ರಾಯರೆಡ್ಡಿ, ವಿಜಯ್ ಕುಲಕರ್ಣಿ, ರಾಘವೇಂದ್ರ ಹಿಟ್ನಾಳ್, ಶಿವಲಿಂಗೇಗೌಡ, ಪ್ರಸಾದ್ ಅಬ್ಬಯ್ಯ, ರೂಪಾ ಶಶಿಧರ್, ರಾಜೇಗೌಡ, ನರೇಂದ್ರ ಸ್ವಾಮಿ ಸೇರಿದಂತೆ ಹಲವು ಶಾಸಕರಿಗೆ ಸ್ಥಾನ ಸಿಗುವ ಸಾಧ್ಯತೆ ಇದೆ. ಒಟ್ಟಾರೆ ಇಂದೇ ನಿಗಮ ಮಂಡಳಿ ಸ್ಥಾನದ ಪಟ್ಟಿ ಫೈನಲ್ ಆಗಲಿದೆ ಎಂದು ಹೇಳಲಾಗುತ್ತಿದೆ.


Related Articles

Back to top button