
ಪ್ರಗತಿವಾಹಿನಿ ಸುದ್ದಿ: ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಮಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡ ಸಚಿವ ಸ್ಥಾನವೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ.
34 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ನಡುವೆ ಕೆಲ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಇದೀಗ ಶಾಸಕ ಸುಬ್ಬಾರೆಡ್ಡಿ ತಮಗೆ ನಿಗಮ ಮಂಡಳಿ ಬೇಡ ಎಂದಿದ್ದಾರೆ.
ಕರ್ನಾಟಕ ರಾಜ್ಯ ಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಸುಬ್ಬಾರೆಡ್ಡಿಯನ್ನು ನೇಮಿಸಲಾಗಿತ್ತು. ಆದರೆ ತಮಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವೇ ಬೇಡ. ನನಗೆ ಸಚಿವ ಸ್ಥಾನ ಬೇಕು. ಎರಡುವರೆ ವರ್ಷದ ಬಳಿಕ ಸಚಿವ ಸ್ಥಾನ ಕೊಡುವುದಾಗಿ ಭರವಸೆ ಕೊಟ್ಟಿದ್ದಾರೆ. ನನಗೆ ಕೊಡುವುದಾದರೆ ಸಚಿವ ಸ್ಥಾನ ಕೊಡಲಿ ಎಂದು ಒತ್ತಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ