Latest

ಇಂದಿನಿಂದಲೇ ನೈಟ್ ಕರ್ಫ್ಯೂ ರದ್ದು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು  ಕೋವಿಡ್ 19 ಹಿನ್ನೆಲೆಯಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರ ವರೆಗೆ ವಿಧಿಸಲಾಗಿದ್ದ ನೈಟ್ ಕರ್ಫ್ಯೂ ವನ್ನು ಸರ್ಕಾರ ಹಿಂಪಡೆದಿದೆ.
ವಿಪತ್ತು ನಿರ್ವಹಣಾಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಕೊರೋನಾ ಇಳಿಕೆಯಾದ ಹಿನ್ನೆಲೆಯಲ್ಲಿ ಸರಕಾರ ಆದೇಶ ಹೊರಡಿಸಿದೆ.

Home add -Advt

ರಾಜ್ಯದಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿತ್ತು.

ಇದರೊಂದಿಗೆ ಕೋವಿಡ್ ಸಮುಚಿತ ವರ್ತನೆ ಹಾಗೂ ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪಾಲಿಸುವ ಷರತ್ತಿಗೊಳಪಟ್ಟು ಕುದುರೆ ಓಟದ ಪಂದ್ಯಗಳನ್ನು ನಡೆಸಲು ಅನುಮತಿ ನೀಡಲಾಗಿದೆ. ಸ್ಥಳಾವಕಾಶದ ಸಾಮರ್ಥ್ಯದಷ್ಟು ಮಾತ್ರ ಕುದುರೆ ಓಟದ ಪೋಷಕರು ಭಾಗವಹಿಸಬೇಕು. ಅವರಿಗೆ ಎರಡೂ ಡೋಸ್ ಕೋವಿಡ್ ಲಸಿಕೆ ಕಡ್ದಾಯ ವಾಗಿ ಪಡೆದಿರಬೇಕು ಎಂದು ಆದೇಶ ತಿಳಿಸಿದೆ

ಗೃಹ ಸಚಿವರ ಹೆಸರಲ್ಲಿ ಕೋಟ್ಯಂತರ ರೂಪಾಯಿ ವಂಚನೆ; ಆರೋಪಿ ಪೊಲೀಸ್ ಬಲೆಗೆ

Related Articles

Back to top button