ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಕೊರೊನಾ ಮೂರನೆ ಅಲೆ ನಿಯಂತ್ರಣಕ್ಕೆ ರಾಜ್ಯದಲ್ಲಿ ಇಂದಿನಿಂದ 10 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೆ ಬರುತ್ತಿದ್ದು, ಕರ್ಫ್ಯೂ ನಿಯಮ ಉಲ್ಲಂಘಿಸಿದರೆ ಎಫ್ ಐ ಆರ್ ದಾಖಲಿಸುವುದಾಗಿ ಬಳ್ಳಾರಿ ಜಿಲ್ಲಾ ಎಸ್ ಪಿ ಸೈದುಲ್ ಅದಾವತ್ ಎಚ್ಚರಿಕೆ ನೀಡಿದ್ದಾರೆ.
ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಾಗಲಿದೆ. 10 ಗಂಟೆ ಬಳಿಕ ಅನಗತ್ಯವಾಗಿ ಓಡಾಟ ನಡೆಸುವವರ ವಿರುದ್ಧ ಎಫ್ ಐ ಆರ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 7 ಕಡೆ ಚಕ್ ಪೋಸ್ಟ್ ಹಾಕಲಾಗಿದೆ. ಗೂಡ್ಸ್ ವಾಹನ, ಜಿಲ್ಲಾ ಬಸ್ ಗಳಿಗೆ ಯಾವುದೇ ನಿರ್ಬಂಧವಿಲ್ಲ. ಖಾಸಗಿ ವಾಹನ ಸಂಚಾರಕ್ಕೆ ಅವಕಾಶವಿಲ್ಲ. ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದ್ದು, ಅನಗತ್ಯ ಓಡಾಟ ನಡೆಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಹೊಸ ವರ್ಷಾಚರಣೆಗೆ ಗುಂಪು ಸೇರಲು ಅವಕಾಶವಿಲ್ಲ ಎಂದು ಎಚ್ಚರಿಸಿದರು.
ಮತ್ತೆ 3 ಕೊರೊನಾ ಲಸಿಕೆಗೆ ಅನುಮೋದನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ