Latest

ನೈಟ್ ಕರ್ಪ್ಯೂನಲ್ಲಿ ಬದಲಾವಣೆ ಮಾಡಿದ ಸರ್ಕಾರ; ಸಮಗ್ರ ವಿವರ ಇಲ್ಲಿದೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಜಾರಿಗೊಳಿಸಲಾಗಿದ್ದ ನೈಟ್ ಕರ್ಫ್ಯೂ ಇಂದು ರಾತ್ರಿ ಬದಲಾಗಿ ನಾಳೆ ರಾತ್ರಿಯಿಂದ ಜಾರಿಗೆ ಬರಲಿದ್ದು, ಕೆಲ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಗೈಡ್ ಲೈನ್ ಬಿಡುಗಡೆ ಮಾಡಿದೆ.

ಕೊರೊನಾ ನಿಯಂತ್ರಣಕ್ಕಾಗಿ ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ 9 ದಿನಗಳ ಕಾಲ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಹೇರಿತ್ತು. ಇದೀಗ ಏಕಾಏಕಿ ಕರ್ಫ್ಯೂ ಜಾರಿಯಿಂದ ಜನರಿಗೆ ತೊಂದರೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕೆಲ ಬದಲಾವಣೆ ಮಾಡಿದೆ.

Home add -Advt

ಇಂದು ರಾತ್ರಿ 10 ಗಂಟೆಯಿದ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಗೆ ಬರಲಿದ್ದ ನೈಟ್ ಕರ್ಫೂವನ್ನು ಒಂದು ದಿನ ಮುಂದೂಡಲಾಗಿದ್ದು, ನಾಳೆ ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಜನವರಿ 2ರವರೆಗೆ ನೈಟ್ ಕರ್ಫ್ಯೂ ಜಾರಿಗೆ ಬರಲಿದೆ.

ಕ್ರಿಸ್ ಮಸ್ ಹಿನ್ನೆಲೆಯಲ್ಲಿ ವಿಶೇಷ ಪ್ರಾರ್ಥನೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗಿದೆ. ರಾತ್ರಿ ಬಸ್, ರೈಲು, ವಿಮಾನ ಸಂಚಾರದಲ್ಲಿ ಯಾವುದೇ ಅಡೆತಡೆ ಇರುವುದಿಲ್ಲ. ಪ್ರಯಾಣಿಕರ ಓಡಾಡಕ್ಕಾಗಿ ಟ್ಯಾಕ್ಸಿ, ಆಟೋ, ಕ್ಯಾಬ್ ಸಂಚಾರಕ್ಕೂ ಅವಕಾಶ ನೀಡಲಾಗಿದೆ. 24 ಗಂಟೆ ಕಾರ್ಯನಿರ್ವಹಿಸುವ ಕಾರ್ಖಾನೆಗಳಿಗೆ ಯಾವುದೇ ನಿರ್ಬಂಧವಿಲ್ಲ. ನೈಟ್ ಶಿಫ್ಟ್ ನಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೂ ನಿರ್ಬಂಧವಿಲ್ಲ.

ಇನ್ನು ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದ್ದು, ಯಾವುದೇ ಪಾರ್ಟಿ, ಸಭೆ, ಜನರ ಗುಂಪು ಒಂದೆಡೆ ಸೇರುವುದನ್ನು ನಿಷೇಧಿಸಲಾಗಿದೆ.

ಪೂರ್ಣ ವಿವರಗಳಿಗೆ ಕ್ಲಿಕ್ ಮಾಡಿ – Order _RD 158 TNR 2020

Related Articles

Back to top button